ಸಾರಾಂಶ
ಕಾಂಗ್ರೆಸ್ ಪಕ್ಷದ ವೈಫಲ್ಯದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳಾಗುತ್ತಿವೆ
ಧಾರವಾಡ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ಬಿಜೆಪಿ ಹು-ಧಾ ಪಶ್ಚಿಮ ಕ್ಷೇತ್ರದ ಮಂಡಲದಿಂದ ಇಲ್ಲಿಯ ಜುಬ್ಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಂಡಲ ಅಧ್ಯಕ್ಷ ಮಂಜುನಾಥ ಮಲ್ಲಿಗವಾಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳಾಗುತ್ತಿವೆ.ಕೂಡಲೇ ಆರೋಪಿಗಳನ್ನು ಬಂಧಿಸಿ ಶಿಕ್ಷಿಸದೇ ಹೋದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ವಿಜಯಾನಂದ ಶೆಟ್ಟಿ,ನಿಂಗಪ್ಪ ಸುತಗಟ್ಟಿ, ಮುಖಂಡರಾದ ಬಸವರಾಜ ಗರಗ, ರಾಜು ಕೊಟ್ಟಣ್ಣನವರ, ಶಿವಣ್ಣ ಬಡಗಣ್ಣನವರ, ಬಸವರಾಜ ಮುತ್ತಳ್ಳಿ, ಪಾಲಿಕೆ ಸದಸ್ಯರಾದ ಆನಂದ ಯಾವಗಲ್, ಜ್ಯೋತಿ ಪಾಟೀಲ, ಶಂಕರ ಶೆಳಕೆ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ಬಾಗಿಲದ, ಗುರುರಾಜ ಕಾಟೇನವರ, ಸದಾಶಿವ ಭಜಂತ್ರಿ ಇದ್ದರು.