ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ

| Published : Aug 19 2024, 12:53 AM IST

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

, ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಭಟ್ಕಳ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಮಹಿಳಾ ಮೋರ್ಚಾ ಪಟ್ಟಣದ ಮೂಡಭಟ್ಕಳದ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಭಟ್ಕಳ ಅವರು, ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇದೊಂದು ಹೇಯ ಘಟನೆಯಾಗಿದ್ದು, ಇಂತಹ ಘಟನೆಯಿಂದ ಮಹಿಳೆಯರಿಗೆ ರಕ್ಷಣೆ ಇಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಸರ್ಕಾರ ಮುಂದೆ ಇಂತಹ ಘಟನೆ ನಡೆಯದಂತೆ ನಿಗಾ ವಹಿಸಬೇಕು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಸುಬ್ರಾಯ ದೇವಡಿಗ, ಶ್ರೀಕಾಂತ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ಹೇರೂರ್ಕರ್, ಸವಿತಾ ಗೊಂಡ, ಯಮುನಾ ನಾಯ್ಕ, ಪರಿಮಳ ಶೇಟ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರಿದ್ದರು.