ಇಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ

| Published : Nov 24 2023, 01:30 AM IST

ಸಾರಾಂಶ

ಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

- ರೈತರ ಕೊಳೆವೆಬಾವಿಗೆ ವಿದ್ಯುತ್ ಅಕ್ರಮ ಸಕ್ರಮ ಸಂಪರ್ಕ ಕಲ್ಪಿಸುವಲ್ಲಿ ಸಂಪೂರ್ಣ ವಿಫಲ

- ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ- - - ಕನ್ನಡಪ್ರಭ ವಾರ್ತೆ, ಶಿರಾಳಕೊಪ್ಪ

ಬರ ಪರಿಹಾರ ವಿಳಂಬ ನೀತಿ ಹಾಗೂ ರೈತವಿರೋಧಿ ನೀತಿ ಖಂಡಿಸಿ 24ರಂದು ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ರೈತಸಂಘ ಅಧ್ಯಕ್ಷ ಹಾಲೇಶಪ್ಪಗೌಡ ಹೇಳಿದರು.

ಶಿರಾಳಕೊಪ್ಪ ಪ್ರವಾಸಿ ಮಂದಿರದಲ್ಲಿ ಬುಧವಾರ ಜಿಲ್ಲಾ ರೈತ ಸಂಘ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿದರೆ ರೈತರಿಗೆ ಭಾರಿ ಒಳಿತು ಮಾಡುತ್ತಾರೆ ಎಂದು ಕಳೆದ ಚುನಾವಣೆಯಲ್ಲಿ ರೈತಸಂಘ ಬೆಂಬಲಿಸಿತು. ಆದರೆ ಈ ಸರ್ಕಾರ ಸಂಪೂರ್ಣ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದರು.

ಮಳೆಯಾಗದೇ ನಷ್ಟವಾದ ಬೆಳೆಗೆ ಪರಿಹಾರ, ಬೆಳೆವಿಮೆಯನ್ನು ನೀಡಿಲ್ಲ. ಎಲ್ಲ ರಾಜಕೀಯ ಪಕ್ಷಗಳು ರೈತರನ್ನು ಶೋಷಿಸುತ್ತಿವೆ. ರೈತರ ಕೊಳೆವೆಬಾವಿಗೆ ವಿದ್ಯುತ್ ಅಕ್ರಮ ಸಕ್ರಮ ಸಂಪರ್ಕ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದ 24ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಜಿಲ್ಲೆಯ ಎಲ್ಲ ತಾಲೂಕಿನ ರೈತರು ಹೋರಾಟದಲ್ಲಿ ಭಾಗ ವಹಿಸಬೇಕು ಎಂದರು.

ಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತ ರಾವ್ ಘೋರ್ಪಡೆ ಮಾತನಾಡಿ, 191 ತಾಲೂಕಿನಲ್ಲಿ ಬರವಿದೆ ಎಂದು ಸರ್ಕಾರ ಘೋಷಣೆ ಮಾಡಿದೆಯೇ ಹೊರತು, ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ಬಗ್ಗೆ ಕಿಂಚತ್ತು ತಲೆ ಕೆಡಿಸಿಕೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುವುದು ಎಂದರು.

ಜಿಲ್ಲಾ ಗೌರವಾಧ್ಯಕ್ಷ ಈರಣ್ಣ ಪ್ಯಾಟಿ ಮಾತನಾಡಿ, ಸರ್ಕಾರದ ವೈಫಲ್ಯಗಳನ್ನು ಖಂಡಿಸಿ 24ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಕೊಟ್ರೇಶ್ ಅರುಣಕುಮಾರ್ ಮಾತನಾಡಿದರು.

- - -

-22ಕೆಎಸ್‌ಎಚ್‌ಆರ್‌1:

ಶಿರಾಳಕೊಪ್ಪ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಹಾಲೇಶಪ್ಪಗೌಡ ಮಾತನಾಡಿದರು.