ಪೋಲಿಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ

| Published : May 26 2024, 01:33 AM IST

ಪೋಲಿಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳ ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಶನಿವಾರ ದಲಿತ ಸಂಘರ್ಷ ಸಮಿತಿ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭವಾರ್ತೆ ಜಮಖಂಡಿ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಜೀವ ಎಂ. ಮತ್ತು ಡಿಎಸ್‌ಪಿ ವಿಜಯಕುಮಾರ ತಳವಾರ ಅವರನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಶನಿವಾರ ದಲಿತ ಸಂಘರ್ಷ ಸಮಿತಿ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರ ಕೂಡಲೇ ಅಮಾನತ್ತು ಆದೇಶವನ್ನು ಹಿಂದಕ್ಕೆ ಪಡೆಯಬೇಕು ಮತ್ತು ಅಮಾನತ್ತಾಗಿರುವ ಅಧಿಕಾರಿಗಳನ್ನು ಅದೇ ಸ್ಥಳದಲ್ಲಿ ಮರು ನೇಮಕ ಮಾಡಬೇಕೆಂದು ಆಗ್ರಹಿಸಿದರು.

ಸಮಾಜದ ಮುಖಂಡರಾದ ಮುತ್ತಣ್ಣ ಮೇತ್ರಿ, ಯಮನೂರ ಮೂಲಂಗಿ ಮಾತನಾಡಿ, ಸರ್ಕಾರದ ವೈಫಲ್ಯದಿಂದ ಇಂತಹ ಘಟನೆಗಳು ನಡೆಯುತ್ತಿವೆ. ಆದರೆ, ದಲಿತ ಅಧಿಕಾರಿಗಳನ್ನು ಅಮಾನತ್ತು ಮಾಡಿರುವುದು ಖಂಡನೀಯ. ಸರ್ಕಾರ ಈ ಬಗ್ಗೆ ಸೂಕ್ತಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು

ಮುಖಂಡರಾದ ಶಶಿಧರ ದೊಡಮನಿ, ಸಂಗಮೇಶ ಮಾದರ, ಸಂಜುಪೂಜಾರಿ, ಪ್ರಕಾಶ ಹುಕ್ಕೆಣ್ಣವರ, ವಿರೇಶ ರಾಮೋಜಿ, ಯಮುನಪ್ಪ ಲಿಂಗನೂರ, ಪಾಂಡಪ್ಪ ಹೊಸಮನಿ ಮುಂತಾದವರು ಉಪಸ್ಥಿತರಿದ್ದರು. ತಹಸೀಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.