ಸಾರಾಂಶ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರವನ್ನು ತಕ್ಷಣ ನಿಲ್ಲಿಸಬೇಕು. ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಹಿಂದೂಗಳ ರಕ್ಷಣೆ ಮಾಡಬೇಕು. ಬಾಂಗ್ಲಾ ಸರ್ಕಾರ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬೇಲಿಮಠದ ಶಿವರುದ್ರ ಸ್ವಾಮೀಜಿ ಮಾತನಾಡಿ, ಬಾಂಗ್ಲಾದಲ್ಲಿ ನಡೆಯುತ್ತಿರುವ ದೌರ್ಜನ್ಯ ಖಂಡನೀಯವಾಗಿದ್ದು ಹಿಂದೂ ಸಮಾಜ ಇದನ್ನು ಒಗ್ಗಟ್ಟಾಗಿ ವಿರೋಧಿಸಬೇಕು ಎಂದು ಕರೆ ನೀಡಿದರು.
ಸಾಮಾಜಿಕ ಹೋರಾಟಗಾರ ಫಟಾಫಟ್ ಶ್ರೀನಿವಾಸ್, ಹಿಂದೂ ಹೋರಾಟಗಾರ ಗಿರಿಧರ್ ಉಪಾಧ್ಯಾಯ, ಕ್ಯಾಥೋಲಿಕ್ ಸಂಘಟಕ ಕೆನಡಿ ಮತ್ತಿತರರು ಮಾತನಾಡಿದರು.