ಸಾರಾಂಶ
Protest against Waqf led by State President Vijayendra on December 5
-ರೈತರ ಜಮೀನು ವಕ್ಫ್ ಮಂಡಳಿ ಪಾಲಾಗುವುದಕ್ಕೆ ಬಿಡುವುದಿಲ್ಲ: ಚಂದ್ರಶೇಖರ್
-----ಕನ್ನಡಪ್ರಭ ವಾರ್ತೆ ಶಹಾಪುರ
ರೈತರ ಒಂದಿಂಚು ಜಮೀನು ವಕ್ಫ್ ಮಂಡಳಿ ಪಾಲಾಗುವುದಕ್ಕೆ ಅವಕಾಶ ನೀಡುವುದಿಲ್ಲ. ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ನಮ್ಮ ಭೂಮಿ ನಮ್ಮ ಹಕ್ಕು'''''''' ಜನಜಾಗೃತಿ ಆಂದೋಲನದ ಭಾಗವಾಗಿ ಡಿ.5 ರಂದು ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹೋರಾಟದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ತಿರುಪತಿ ಹತ್ತಿಕಟಗಿ ಹಾಗೂ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್ ಯಾಳಗಿ ಜಂಟಿ ಹೇಳಿಕೆ ನೀಡಿದ್ದಾರೆ.ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನು ಹೊಡೆಯುವ ಹುನ್ನಾರವು ನಡೆಯುತ್ತಿದೆ. ಇದರ ಬಗ್ಗೆ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮೌನ ವಹಿಸಿರುವುದಕ್ಕೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿವೆ. ಇದನ್ನು ಗಮನಿಸಿದಾಗ ಒಂದೇ ಸಮುದಾಯದ ಮೇಲೆ ಅವರಿಗೆ ಪ್ರೀತಿ ಇರುವುದು ಎದ್ದು ಕಾಣುತ್ತದೆ ಎಂದರು.
ಶಹಾಪುರ ತಾಲೂಕಿನಲ್ಲಿ ಅತಿ ಹೆಚ್ಚು ಜಮೀನಿನ ಪಹಣಿಯ ಕಾಲಂ ನಂಬರ್ 11ರಲ್ಲಿ ವಕ್ಫ್ ಬಲವಂತದಿಂದ ಸೇರಿಸಲಾಗಿದೆ ಎಂದು ದೂರಿದರು. ನಗರದಲ್ಲಿ ಡಿ.5 ರಂದು ಗುರುವಾರ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ವಕ್ಫ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹೋರಾಟದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದರು.ನಗರದ ಚರಬಸವೇಶ್ವರ ಕಮಾನದಿಂದ ಬಸವೇಶ್ವರ ವೃತ್ತದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಬಸವೇಶ್ವರ ವೃತ್ತದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿಯ ಹಿರಿಯ ಮುಖಂಡರಾದ ಬಸವರಾಜಪ್ಪ ವಿಭೂತಿಹಳ್ಳಿ, ಅಡಿವೆಪ್ಪ ಸಾಹು ಜಾಕಾ, ಮಲ್ಲಿಕಾರ್ಜುನ ಕಂದಕೂರ, ದೇವೇಂದ್ರ ಕೊನೇರ್, ರಾಜಶೇಖರ್ ಗೂಗಲ್, ರಾಮು ನಾಯಕ್ ಇದ್ದರು.----
ಫೋಟೊ: ಶಹಾಪುರ ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು.3ವೈಡಿಆರ್14: