ಶಾಸಕ ಸ್ಥಾನದಿಂದ ಮುನಿರತ್ನ ವಜಾಗೊಳಿಸಿ

| Published : Sep 21 2024, 02:02 AM IST

ಸಾರಾಂಶ

ದಲಿತರ ಬಗ್ಗೆ ಕೀಳಾಗಿ ಮಾತನಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಮಹಿಳೆಯರ ಬಗ್ಗೆ ಅಸಂಬದ್ಧ ಮಾತನಾಡಿ, ಜಾತಿ ನಿಂದನೆ ಮಾಡಿರುವ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಸದಸ್ಯರು ಮಾನಸ ಗಂಗೋತ್ರಿಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟಿಸಿದರು.ಸಂಘದ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ದಲಿತರ ಮೇಲೆ ಇನ್ನೂ ದಬ್ಬಾಳಿಕೆ ದೌರ್ಜನ್ಯಗಳು ನಡೆಯುತ್ತಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವಂತಹ ಮುನಿರತ್ನ ಅವರು ದಲಿತರಿಂದ ಮತ ಪಡೆದು ಶಾಸಕರಾಗಿ, ದಲಿತರ ಬಗ್ಗೆ ಕೀಳಾಗಿ ಮಾತನಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದಾರೆ. ಇಂತಹ ಹೇಳಿಕೆಯನ್ನು ನೀಡಿರುವ ಮುನಿರತ್ನ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದರು. ಸಂಘದ ಕಾರ್ಯಾಧ್ಯಕ್ಷ ಕಲ್ಲಳ್ಳಿ ಕುಮಾರ್, ಉಪಾಧ್ಯಕ್ಷ ಮಲ್ಲೇಶ್, ಲಿಂಗರಾಜು, ವರಹಳ್ಳಿ ಆನಂದ, ವಜ್ರಮುನಿ, ಜಗದೀಶ, ವಿಶ್ವಪ್ರಸಾದ್, ನವೀನ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಇದ್ದರು.