ಉಡುಪಿ : ಕೊರಗ ಸಮುದಾಯದ ಯುವಜನರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ನೀಡಬೇಕೆಂದು ಒತ್ತಾಯಿಸಿ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ನಡೆಯುತ್ತಿರುವ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕರಾದ ಮಂಜುನಾಥ ಭಂಡಾರಿ ಅವರು ಭೇಟಿ ನೀಡಿದರು.

ಉಡುಪಿ : ಕೊರಗ ಸಮುದಾಯದ ಯುವಜನರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ನೀಡಬೇಕೆಂದು ಒತ್ತಾಯಿಸಿ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ನಡೆಯುತ್ತಿರುವ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕರಾದ ಮಂಜುನಾಥ ಭಂಡಾರಿ ಅವರು ಭೇಟಿ ನೀಡಿದರು.ಅವರು ಧರಣಿ ನಿರತರಿಂದ ಅವರ ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಮಂಜುನಾಥ ಭಂಡಾರಿ ಅವರು, ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ಜೊತೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಕೊರಗ ಸಮುದಾಯದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ರಾಜ್ಯ ಆರ್‌ಜಿಪಿಆರ್‌ಎಸ್ ಸಂಘಟನೆಯ ಉಪಾಧ್ಯಕ್ಷೆ ರೋಶನಿ ಒಲಿವೆರ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಡಾ. ಸುನಿತಾ ಶೆಟ್ಟಿ, ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಸಮಿತಿಯ ಅಧ್ಯಕ್ಷ ವಿಶ್ವಾಸ್ ಅಮೀನ್, ಪೆರ್ಡೂರು ಗ್ರಾಪಂ ಸದಸ್ಯ ನವೀನ್ ಸಾಲಿಯಾನ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.ಧರಣಿ ನಿರತ ಕೊರಗ ಸಮುದಾಯದವರು ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಶೀಘ್ರ ಸ್ಪಂದಿಸಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.