ನಗರದ ಆದಿ ಉಡುಪಿಯಲ್ಲಿರುವ ಎಪಿಎಂಸಿ ಆವರಣದಲ್ಲಿ ಅಧಿಕಾರಿಗಳಿಂದ ಭ್ರಷ್ಟಾಚಾರ ಮತ್ತು ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಎಪಿಎಂಸಿ ರಕ್ಷಣಾ ಸಮಿತಿಯು ಉರುಳು ಸೇವೆಯ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರತಿಭಟನೆ ನಡೆಸಿತು.

ಉಡುಪಿ: ನಗರದ ಆದಿ ಉಡುಪಿಯಲ್ಲಿರುವ ಎಪಿಎಂಸಿ ಆವರಣದಲ್ಲಿ ಅಧಿಕಾರಿಗಳಿಂದ ಭ್ರಷ್ಟಾಚಾರ ಮತ್ತು ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಎಪಿಎಂಸಿ ರಕ್ಷಣಾ ಸಮಿತಿಯು ಉರುಳು ಸೇವೆಯ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರತಿಭಟನೆ ನಡೆಸಿತು.ಎಪಿಎಂಸಿಯ ಸರ್ಕಾರಿ ವಾಹನವನ್ನು ಲೆಕ್ಕಿಗ ಹಾಗೂ ಚಾಲಕರು ಸ್ವಂತ ಬಳಕೆಗೆ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ ನಿತ್ಯ ಮಾರುಕಟ್ಟೆ ನಿವೇಶನವನ್ನು ಲೀಸ್ ಆ್ಯಂಡ್ ಸೇಲ್ ಹೆಸರಿನಲ್ಲಿ ತಮಗೆ ಬೇಕಾದವರಿಗೆ ಕಡಿಮೆ ಬೆಲೆಗೆ ನೀಡಿದ್ದಾರೆ. ಕಳೆದ 3 ವರ್ಷಗಳಿಂದ ಎಪಿಎಂಸಿಯ ಲೆಕ್ಕಿಗ ಹಾಗೂ ಕಾರ್ಯದರ್ಶಿ ಸೇರಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಿದ ಬಗ್ಗೆ ದಾಖಲೆಗಳನ್ನು ಸಲ್ಲಿಸಿ, ಪ್ರತಿಭಟನೆ ನಡೆಸಿದ್ದರೂ ಜಿಲ್ಲಾಡಳಿತ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಿಯಮ ಉಲ್ಲಂಘಿಸಿ ಖಾಸಗಿಯವರಿಂದ ನಿತ್ಯಮಾರುಕಟ್ಟೆಯಲ್ಲಿ ದಾಸ್ತಾನು ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ಇಲ್ಲಿದ್ದ ಲಕ್ಷಾಂತರ ರು. ಬೆಳೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡಲಾಗಿದೆ. ಇಲ್ಲಿರುವ ಕೆಲವು ಮಳಿಗೆಗಳಲ್ಲಿ ಪರವಾನಿಗೆ ಇಲ್ಲದೇ ವರ್ತಕರು ರಾತ್ರಿ 3ರಿಂದ ಬೆಳಿಗ್ಗೆ 8ರವರೆಗೆ ತಮ್ಮ ವ್ಯಾಪಾರಕ್ಕೆ ಬಳಸಿಕೊಂಡು ಸರ್ಕಾರಕ್ಕೆ ವಂಚಿಸುತಿದ್ದಾರೆ. ಇನ್ನಾದರೂ ಈ ಎಲ್ಲ ಅವ್ಯಹಾರಗಳ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆಎಪಿಎಂಸಿ ರಕ್ಷಣಾ ಸಮಿತಿ ಅಧ್ಯಕ್ಷ ವಿಜಯಾ ಕೊಡವೂರು, ಕೃಷಿ ಉತ್ಪನ್ನ ಮಾರಾಟಗಾರರ ಒಕ್ಕೂಟದ ಅಧ್ಯಕ್ಷ ಸುಭಾಷಿತ್ ಕುಮಾರ್, ಉಡುಪಿ ಬಿಜೆಪಿ ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜನಧ್ವನಿ ಉಡುಪಿಯ ನಟೇಶ್, ಎಪಿಎಂಸಿ ಸದಸ್ಯ ರಮಾಕಾಂತ್ ಕಾಮತ್, ವರ್ತಕರಾದ ಪ್ರಭುಗೌಡ, ಫಯಾಜ್, ಜಗಳೂರಯ್ಯ, ರಮಾನಾಥ ಪೈ, ರಾಧಾಕೃಷ್ಣ ಮಲ್ಪೆ ಸೇರಿದಂತೆ ನಾಗರಿಕರು ಹಾಗೂ ಗ್ರಾಹಕರು ಇದ್ದರು.