ನೇಹಾ ಹತ್ಯೆ ಖಂಡಿಸಿ ಔರಾದ್‌ನಲ್ಲಿ ಎಬಿವಿಪಿಯಿಂದ ಪ್ರತಿಭಟನೆ

| Published : Apr 21 2024, 02:20 AM IST

ನೇಹಾ ಹತ್ಯೆ ಖಂಡಿಸಿ ಔರಾದ್‌ನಲ್ಲಿ ಎಬಿವಿಪಿಯಿಂದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಭಾಲ್ಕಿ ಪಟ್ಟಣದ ತಹಸೀಲ್‌ ಕಚೇರಿಯಲ್ಲಿ ನೇಹಾ ಕೊಲೆ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಯಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರ ತಹಸೀಲ್ದಾರ್‌ ಮೂಲಕ ಸಲ್ಲಿಸಲಾಯಿತು.

ಔರಾದ್: ಹುಬ್ಬಳ್ಳಿ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಭೀಕರ ಹತ್ಯೆಯನ್ನು ಖಂಡಿಸಿ ತಾಲೂಕು ಎಬಿವಿಪಿಯಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಶನಿವಾರ ಕನ್ನಡಾಂಬೆ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಯೋಗಾಚಾರ್ಯ ರಾಜಕುಮಾರ್ ನಾಯ್ಕ್, ಕಾನೂನಿನ ಯಾವುದೇ ಭಯವಿಲ್ಲದೆ ಫಯಾಜ್ ಎಂಬಾತ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಮಾಡಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.

ರಾಜಾರೋಷವಾಗಿ ಇಂತಹ ಕೃತ್ಯ ನಡೆಯುತ್ತಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಇದರಿಂದ ಕಾಲೇಜಿಗೆ ವಿದ್ಯಾರ್ಥಿಗಳು ಹೋಗಲು ಭಯದ ವಾತವಾರಣ ಉಂಟಾಗುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು. ಸೂಕ್ತ ತನಿಖೆ ನಡೆಸಿ ಕೊಲೆ ಮಾಡಿರುವ ಅಪರಾಧಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ, ನೀಲಮ್ಮಾ, ಪೂಜಾ, ವೈಷ್ಣವಿ, ಭಾಗ್ಯಶ್ರೀ, ಸುಹಾಸಿನಿ, ರೊಹಿನಿ, ವಿಜಯಕುಮಾರ್, ಗಣೇಶ, ಲಕ್ಷ್ಮೀಕಾಂತ ಚಾರೆ, ಮಲ್ಲಿಕಾರ್ಜುನ ಟೆಕರಾಜ, ಅನೀಲ ಮೇತ್ರೆ, ರಮೇಶ ವಾಘಮೋಡೆ, ಸೂರ್ಯಕಾಂತ ಇಟಗ್ಯಾಳ, ನಿತಿನ್ ಮುಲಗೆ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.