ಸಾರಾಂಶ
ಒಬ್ಬ ಗೃಹಮಂತ್ರಿಯಾಗಿ ಸಂವಿಧಾನದ ಘನತೆ ಗೌರವ ಎತ್ತಿಹಿಡಿಯಬೇಕಾದ ಅಮಿತ್ ಶಾ ಒಬ್ಬ ಮನು ವಾದದ ಪರಮಾಗಿ ಮಾತನಾಡಿದ್ದಾರೆ. ಸಚಿವರ ಹೇಳಿಕೆಯನ್ನು ಸಮರ್ಥಿಸಿ ಕೊಳ್ಳುವ ಮೂಲಕ ಪ್ರಧಾನಿ ಮೋದಿ ಸಹ ತಮ್ಮ ಅವಿವೇಕ ತನವನ್ನು ಪ್ರದರ್ಶಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಸಂಘಟನೆ ರಾಜ್ಯ ಸಂಚಾಲಕ ಅಂದಾನಿ ಸೋಮನಹಳ್ಳಿ ನೇತೃತ್ವದಲ್ಲಿ ಪ್ರತಿಭಟನೆಗಿಳಿದ ದಸಂಸ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.
ನಂತರ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಕಚೇರಿ ಪ್ರವೇಶ ದ್ವಾರದಲ್ಲಿ ಧರಣಿ ನಡೆಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಮಿಷಾ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಪಡಿಸಿದರು.ರಾಷ್ಟ್ರಪತಿಗಳು ಈ ಕೂಡಲೇ ಮಧ್ಯಪ್ರವೇಶ ಮಾಡಿ ಅಂಬೇಡ್ಕರ್ ವಿರುದ್ಧ ಟೀಕೆ ಮಾಡಿರುವ ಅಮಿತ್ ಶಾ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ನಿಂದು ಅಂದಾನಿ ಸೋಮನಹಳ್ಳಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ಶಂಕರ್. ಶಿವು. ದೊರೆಸ್ವಾಮಿ. ರಂಗಸ್ವಾಮಿ. ಸಿದ್ದರಾಜು.ಕುಮಾರ.ರವಿ. ಪ್ರಕಾಶ್. ರಾಜೇಶ್. ಸಂಪತ್ತು. ಸುಂದರ್. ಮಾದೇಶ್ ಮತ್ತಿತರರು ಭಾಗವಹಿಸಿದ್ದರು.ಅಮಿತ್ ಶಾ ಹೇಳಿಕೆಯಿಂದ ಹಕ್ಕುಚ್ಯುತಿ
ಮದ್ದೂರುರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯಿಂದ ಹಕ್ಕು ಚ್ಯುತಿ ಉಲ್ಲಂಘನೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು.
ತಾಲೂಕಿನ ಕದಲೂರು ಗ್ರಾಮದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಹೇಳಿಕೆಯಿಂದ ಸಂವಿಧಾನ ಬರೆದ ಅಂಬೇಡ್ಕರ್ ಅವರಿಗೆ ಅವಮಾನವಾಗಿದೆ. ಹೀಗಾಗಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಪಡಿಸಿದರು.ದೇಶಕ್ಕೆ ಸಂವಿಧಾನ ತಂದುಕೊಟ್ಟ ಅಂಬೇಡ್ಕರ್ ಮಹಾನ್ ವ್ಯಕ್ತಿಯಾಗಿದ್ದಾರೆ. ಇಂತವರ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಅಮಿಶಾ ಈ ರೀತಿ ಮಾತನಾಡಿರುವುದು ಸರಿಯಲ್ಲ. ಹೀಗಾಗಿ ಅವರು ದಲಿತ ಜನಾಂಗದ ಕ್ಷಮೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮದ್ದೂರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಸಿ.ಟಿ.ಶಂಕರ್, ಹರೀಶ ಇದ್ದರು.