ಫೆ.೧೩ರಂದು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

| Published : Feb 11 2024, 01:46 AM IST

ಸಾರಾಂಶ

ಫೆ.೧೩ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ರಿ), ನೇತೃತ್ವದಲ್ಲಿ ಫೆ.೧೩ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಜಿಲ್ಲಾ ಕಾರ್ಯದರ್ಶಿ ಶರಣು ಹೇರೂರ್ ತಿಳಿಸಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ಫೆ.೧೩ರಂದು ಮೂರು ದಿನಗಳ ಕಾಲ ನಾವುಗಳು ಕರ್ತವ್ಯಕ್ಕೆ ಗೈರಾಗುತ್ತಿದ್ದೇವೆ. ಹಲವು ಬೇಡಿಕೆಗಳ ಒತ್ತಾಯಕ್ಕಾಗಿ ಬೆಂಗಳೂರಿಗೆ ತೆರಳುತ್ತಿದ್ದೇವೆ ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದೇವೆ ಎಂದರು.

ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಮಂಜುಳಾ ಚಾಮನೂರ, ಆಶಾ ಕಾರ್ಯಕರ್ತೆರಾದ ಸಾವಿತ್ರಿ ಬಳವಡಗಿ, ಮಲ್ಲಮ್ಮ, ಆಶಾ ಬೇಗಂ, ಮರೆಮ್ಮ ಕಮರವಾಡಿ, ನಾಗಮ್ಮ ಆಲೂರು, ನಾಗಮ್ಮ ಪಾಟೀಲ ಸೂಲಹಳ್ಳಿ, ಗೀತಾ ಬಳವಡಗಿ, ಮಲ್ಲಮ್ಮ ಅಣಿಕೇರಿ, ಗಂಗಮ್ಮ ಕಡಬೂರ, ಭಾಗ್ಯಶ್ರೀ ಚಾಮನೂರ, ಶಂಕುತಲಾ ಹೂಗಾರ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಬಾಬುರಾವ ಶಹಾಬಾದ ಇದ್ದರು.