ಸಾರಾಂಶ
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಮಾತ್ರ ಈ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ಕನ್ನಡಪ್ರಭ ವಾರ್ತೆ ಕಾರವಾರ
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ಅಮಾನವೀಯ ಕೃತ್ಯ ಖಂಡಿಸಿ ನಗರದ ಕಾರವಾರ ಸುಭಾಷ್ ಸರ್ಕಲ್ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು.ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಣಿ ಸದಸ್ಯೆ ರೇಖಾ ಹೆಗಡೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ ಮಾತನಾಡಿ, ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಮಾತ್ರ ಈ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಈ ಘಟನೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ಇದ್ದರೂ, ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಲಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಮಹಿಳಾ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರಡೇಕರ್, ಮಹಿಳಾಮೋರ್ಚಾ ಮಂಡಲ ಅಧ್ಯಕ್ಷೆ ವೃಂದಾ ದಾಮ್ಸಾಡೇಕರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಾಲಾ ಹುಲ್ಸಾರ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಂದನಾ ಶಿರೋಡಕರ್ ಮತ್ತಿತರರು ಇದ್ದರು.