ಸಾರಾಂಶ
ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಬೇಕು,
ಕನ್ನಡಪ್ರಭ ವಾರ್ತೆ ಮೈಸೂರು
ನಾಲ್ಕು ಕಾರ್ಮಿಕ ಸಂಹಿತೆಯನ್ನು ಹಿಂದಕ್ಕೆ ಪಡೆಯಬೇಕು, ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ಇಂಡಿಯನ್ ಟ್ರೇಡ್ ಯೂನಿಯನ್ಸ್ ಪದಾಧಿಕಾರಿಗಳು ನಗರದ ಪುರಭವನ ಆವರಣದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಪ್ರತಿಭಟಿಸಿದರು.ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಬೇಕು, ಎಪಿಎಂಸಿ ವ್ಯವಸ್ಥೆ ಬಲಗೊಳಿಸಬೇಕು, ಗೊಬ್ಬರ ಒಳಗೊಂಡಂತೆ ಕೃಷಿ ಉಡುವಳಿಗೆ ಸಬ್ಸಿಡಿ ಕಡಿತಗೊಳಿಸಬೇಕು, ದೇಶದ ಐಕ್ಯತೆಯನ್ನು ಛಿದ್ರಗೊಳಿಸುವ, ಸೌಹಾರ್ಧತೆ ಹಾಳು ಮಾಡುವ ಕೃತ್ಯ ಹಾಗೂ ಶಕ್ತಿಗಳನ್ನು ನಿಗ್ರಹಿಸಬೇಕು, ಸಂವಿಧಾನದ ಧರ್ಮನಿರಪೇಕ್ಷ ಮೌಲ್ಯ ಸಂರಕ್ಷಿಸಬೇಕು ಎಂದು ಅವರು ಆಗ್ರಹಿಸಿದರು.
ರೈಲ್ವೆ, ವಿದ್ಯುತ್ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಸ್ವರೂಪದ ಖಾಸಗೀಕರಣ ಕೈಬಿಡಬೇಕು, ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆ ಬಲಪಡಿಸಬೇಕು. ಕೇಂದ್ರ ಸರ್ಕಾರವು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಕಾನೂನು- 1996 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸೆಸ್ ಕಾನೂನು ಉಳಿಸಬೇಕು. ಕಲ್ಯಾಣ ಮಂಡಳಿಯಲ್ಲಿನ ನಿಧಿಯನ್ನು ಕಟ್ಟಡ ಕಾರ್ಮಿಕ ಸೌಲಭ್ಯಕ್ಕೆ ಮಾತ್ರ ಬಳಸಬೇಕು ಎಂದು ಅವರು ಒತ್ತಾಯಿಸಿದರು.ಆರೋಗ್ಯ ಹಾಗೂ ಪೌಷ್ಟಿಕ ಆಹಾರ ಪೂರೈಸುವ ಐಸಿಡಿಎಸ್, ಎಂಡಿಎಂ, ಎನ್ಎಚ್ಎಂ, ಐಸಿಪಿಎಸ್, ಎಸ್ಎಸ್ಎ ಮುಂತಾದ ಯೋಜನೆ ಮುಂದುವರೆಸಬೇಕು ಎಂದು ಅವರು ಆಗ್ರಹಿಸಿದರು.