ಸಾರಾಂಶ
ಕನ್ನಡಪ್ರಭ ವಾರ್ತೆ ನಂಜನಗೂಡುಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಸಮನ್ವಯ ಸಮಿತಿಯು ಪ್ರತಿಭಟಿಸಿದರು.ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಮಂಜು ಶಂಕರಪುರ ಮಾತನಾಡಿ, ಕೇಂದ್ರ ಸರ್ಕಾರದ ಗೃಹ ಮಂತ್ರಿ ಅಮಿತ್ ಶಾ ಅವರು ಗೃಹ ಮಂತ್ರಿಯವರ ಹೇಳಿಕೆಯನ್ನು ಪ್ರಧಾನಮಂತ್ರಿ ಮೋದಿ ಸಮರ್ಥಿಸಿಕೊಂಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ, ತಕ್ಷಣ ಗೃಹ ಮಂತ್ರಿಯವರು ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ನಂಜನಗೂಡು ಬಂದ್ ಮಾಡಿ ಉಗ್ರ ಪ್ರತಿಭಟನೆಯ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದರು. ಸಮಿತಿಯ ಗೌರವಾಧ್ಯಕ್ಷ ಮಹದೇವಸ್ವಾಮಿ, ಕಾರ್ಯಾಧ್ಯಕ್ಷ ನಾಗೇಂದ್ರ, ಉಪಾಧ್ಯಕ್ಷ ರಾಜಶೇಖರ್, ಸಹಕಾರ ಕಾರ್ಯದರ್ಶಿ ಸಿದ್ದರಾಜು, ಕಾನೂನು ಸಲಹೆಗಾರ ಮಹದೇವಸ್ವಾಮಿ, ಮಹದೇವಸ್ವಾಮಿ, ಲಿಂಗಯ್ಯ, ಮಹದೇವು, ಸ್ವಾಮಿ ಇದ್ದರು.