ನಬಾರ್ಡ್ ಅನುದಾನ ಕಡಿತ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

| Published : Nov 24 2024, 01:45 AM IST

ನಬಾರ್ಡ್ ಅನುದಾನ ಕಡಿತ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನಬಾರ್ಡ್ ನೆರವು ಕಡಿತವು ಎಂಡಿಸಿ ಬ್ಯಾಂಕುಗಳು, ಸಹಕಾರ ಸಂಘಗಳು ಹಾಗೂ ಇನ್ನಿತರ ಬ್ಯಾಂಕುಗಳ ಮೇಲೆ ಪರಿಣಾಮ ಬೀರುತ್ತವೆ. ರೈತರು ಸಾಲ ಪಡೆಯಲು ಸಾಧ್ಯವಾಗದೇ ಖಾಸಗಿ ವ್ಯಕ್ತಿಗಳ ಮೊರೆ ಹೋಗಬೇಕಾಗುತ್ತಾರೆ.

ಕನ್ನಡಪ್ರಭ ವಾರ್ತೆ ಮೈಸೂರುಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳ ಕಾರಣ ರಾಜ್ಯಕ್ಕೆ ನೀಡುವ ನೆರವಿನಲ್ಲಿ ನಬಾರ್ಡ್ ಶೇ.58 ರಷ್ಟನ್ನು ಕಡಿತ ಮಾಡಿದೆ. ಇದನ್ನು ವಿರೋಧಿಸಿ ಡಿಸೆಂಬರ್ ನಲ್ಲಿ ಬೆಂಗಳೂರಿನ ನಬಾರ್ಡ್ ಕಚೇರಿ ಎದುರು ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.ಬೆಂಗಳೂರಿನಲ್ಲಿ ರೈತ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ವೇಳೆ ಯಾವ ದಿನಾಂಕದಂದು ನಬಾರ್ಡ್ ಕಚೇರಿ ಎದುರು ಪ್ರತಿಭಟನೆ ನಡೆಸಬೇಕೆಂಬುದನ್ನು ನಿರ್ಧರಿಸಲಾಗುವುದು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ನಬಾರ್ಡ್ ನೆರವು ಕಡಿತವು ಎಂಡಿಸಿ ಬ್ಯಾಂಕುಗಳು, ಸಹಕಾರ ಸಂಘಗಳು ಹಾಗೂ ಇನ್ನಿತರ ಬ್ಯಾಂಕುಗಳ ಮೇಲೆ ಪರಿಣಾಮ ಬೀರುತ್ತವೆ. ರೈತರು ಸಾಲ ಪಡೆಯಲು ಸಾಧ್ಯವಾಗದೇ ಖಾಸಗಿ ವ್ಯಕ್ತಿಗಳ ಮೊರೆ ಹೋಗಬೇಕಾಗುತ್ತಾರೆ. ಇವುಗಳ ಬಡ್ಡಿ ದರ, ದಮನಕಾರಿ ನೀತಿಯಿಂದಾಗಿ ಈಗಾಗಲೇ ಬಹಳಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಮುಂದುವರಿಯುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.ವಕ್ಫ್ ಎಂಬುದು ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಕಾನೂನು, ಸಂಸ್ಥೆ. ಇದರ ಆಸ್ತಿಯನ್ನು ಮುಸ್ಲಿಮರೇ ಹೆಚ್ಚು ಒತ್ತುವರಿ ಮಾಡಿಕೊಂಡಿದ್ದಾರೆ. ಆದರೆ, ಇದೇ ವೇಳೆ ವಕ್ಫ್ ಯಿಂದಾಗಿ ರೈತರು ಜಮೀನು ಕಳೆದುಕೊಳ್ಳಲು ರೈತ ಸಂಘ ಬಿಡುವುದಿಲ್ಲ. ಈ ಕುರಿತಂತೆ ಮುಖ್ಯಮಂತ್ರಿ ಹೇಳಿಕೆ ನೀಡಿದ್ದರೂ ಕಾಯಂ ಆಗಿ ರೈತರಿಗೆ ಹಕ್ಕುಪತ್ರ ನೀಡಬೇಕು. ಒಂದು ವೇಳೆ ಈ ರೀತಿ ಮಾಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.ಮುಖಂಡರಾದ ಹೊಸೂರು ಕುಮಾರ್, ನೇತ್ರಾವತಿ, ಮಂಡಕಳ್ಳಿ ಮಹೇಶ್, ಪಿ. ಮರಂಕಯ್ಯ ಇದ್ದರು.