2026 ರ ಜನವರಿ 5 ರಂದು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಮುಖ್ಯಮಂತ್ರಿಗಳ ಮನೆಯ ಮುಂದೆ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷ ಲೋಕೇಶ್.ಪಿ.ಸಿ.ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರುನ್ಯಾಯಾಲಯಕ್ಕೆ ನೀಡಿದ ಮೌಖಿಕ ಭರವಸೆ ಹುಸಿಗೊಳಿಸಿ, 6000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು, ಅವರ 20 ವರ್ಷಗಳ ಸೇವೆಯನ್ನು ಪರಿಗಣಿಸಿದೆ, ಅರ್ನಹ ಎಂಬ ಹಣೆಪಟ್ಟಿಕಟ್ಟಿ, ಸೇವೆಯಿಂದ ತೆಗೆದು ಹಾಕಿರುವ ಉನ್ನತ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿ, 2026 ರ ಜನವರಿ 5 ರಂದು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಮುಖ್ಯಮಂತ್ರಿಗಳ ಮನೆಯ ಮುಂದೆ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷ ಲೋಕೇಶ್.ಪಿ.ಸಿ.ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸುಮಾರು 20 ಕ್ಕೂ ಹೆಚ್ಚು ವರ್ಷಗಳ ಕಾಲ ನಮ್ಮಿಂದ ಸೇವೆ ಪಡೆದು, ಈಗ ಅನರ್ಹ ಎಂದು ಹೇಳಿ ಕೆಲಸದಿಂದ ತಗೆಯುವ ಮೂಲಕ ಹೈಕೋರ್ಟ್ ಆದೇಶ ಉಲ್ಲಂಘನೆಯ ಜೊತೆಗೆ, ಯುಜಿಸಿ ನಿಯಮವನ್ನು ರಾಜ್ಯ ಸರ್ಕಾರ ಗಾಳಿಗೆ ತೂರಿದೆ. ಸರಕಾರದ ಈ ಜನವಿರೋಧಿ ನಡೆಯ ವಿರುದ್ಧ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಜೊತೆಗೆ, ಪ್ರಾಥಮಿಕ ಶಾಲೆಗಳಲ್ಲಿ ಕೆಪಿಎಸ್ ಮ್ಯಾಗ್ನಟ್ ಶಾಲೆಯ ಹೆಸರಿನಲ್ಲಿ ಅತಂತ್ರರಾಗಿರುವ 70 ಸಾವಿರ ಅತಿಥಿ ಉಪನ್ಯಾಸಕರು ಒಗ್ಗೂಡಿ ಹೋರಾಟದಲ್ಲಿ ಪಾಲ್ಗೊಳ್ಳಲಾಗುವುದು ಎಂದರು.ನಾವು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರಾಗಿ ಸೇರುವ ಸಂದರ್ಭದಲ್ಲಿ ಶೇ 65 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿದ್ದರೆ ಸಾಕು ಎಂಬ ಮಾನದಂಡ ಮುಂದಿಟ್ಟು, ನಮ್ಮನ್ನು ಅತ್ಯಂತ ಕಡಿಮೆ ಗೌರವಧನಕ್ಕೆ ದುಡಿಸಿಕೊಂಡು, ಇನೇನು ನಿವೃತ್ತಿಯ ವಯಸ್ಸು ಹತ್ತಿರವಾಗುತ್ತಿದೆ ಎನ್ನುವ ಸಂದರ್ಭದಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 6 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳಿದೆ. ಕರ್ನಾಟಕ ಹೈಕೋರ್ಟಿಗೆ 24-11-2025 ರಂದು ಸರಕಾರದ ಪರವಾಗಿ ಅಡ್ವಕೇಟ್‌ ಜನರಲ್‌ ಅವರು ಹಾಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ನ್ಯಾಯಪೀಠಕ್ಕೆ ಮೌಖಿಕ ಭರವಸೆ ನೀಡಿ, ಡಿಸೆಂಬರ್ 8 ರಂದು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು ಹಾಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಲು ಆದೇಶ ಮಾಡಲಾಗಿದೆ. ಇದನ್ನು ಖಂಡಿಸಿ ಸಿಎಂ ಮನೆ ಮುಂದೆ ಹೋರಾಟ ಹಮ್ಮಿಕೊಂಡಿರುವುದಾಗಿ ತಿಳಿಸಿದರು.ರಾಜ್ಯ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಸದಸ್ಯರಾದ ಮಂಜುನಾಥ್‌ ಜೋಗಿ ಮಾತನಾಡಿ, ಸುಪ್ರಿಂಕೋರ್ಟಿನ ಆದೇಶದಂತೆ ಅತಿಥಿ ಉಪನ್ಯಾಸಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ.ಜೊತೆಗೆ, ಸತತ 10 ವರ್ಷ ಕಾರ್ಯನಿರ್ವಹಿಸಿದ ಉಪನ್ಯಾಸಕರನ್ನು ಖಾಯಂ ಗೊಳಿಸಬೇಕು ಎಂಬ ಆದೇಶವನ್ನು ಪಾಲಿಸುತ್ತಿಲ್ಲ ಎಂದರು.ಸುದ್ದಿಗೋಷ್ಠಿಯಲ್ಲಿರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಖಜಾಂಚಿ ಮನೋಹರ್.ಎಸ್, ರಂಗಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.