ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟಿಸಿದರು.ನಗರದ ಗಾಂಧಿಚೌಕದಲ್ಲಿ ಜಮಾವಣೆಗೊಂಡ ಜೆಡಿಎಸ್‌ನ ನೂರಾರು ಮಂದಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ರಾಜ್ಯ ಸರ್ಕಾರವು ಜನರ ಜೀವನದ ಜತೆ ಚಲ್ಲಾಟವಾಡುತ್ತಿದೆ. ಬರದಿಂದ ತತ್ತಿರಿಸುವ ಜನರಿಗೆ ಈಗ ಇಂಧನ ಬೆಲೆ ಹೆಚ್ಚಿಸುವ ಮೂಲಕ ತನ್ನ ಗ್ಯಾರಂಟಿ ಯೋಜನೆಗೆ ವಿನಿಯೋಗಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿದ್ದರೂ ಇಂಧನ ಬೆಲೆ ಮಾತ್ರ ಏರಿಕೆ ಮಾಡಲಾಗಿದೆ. ಇದರಿಂದ ಉಳಿದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಮತ್ತು ಬಸ್ದರ ಹೆಚ್ಚುತ್ತದೆ. ಶ್ರಮಿಕರು, ಬಡವರು, ಕೂಲಿ ಕಾರ್ಮಿಕರು ಇದರಿಂದ ಪರಿತಪಿಸುವಂತಾಗುತ್ತದೆ. ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆ ಆದೇಶವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜೆಡಿಎಸ್ಮುಖಂಡ ಎಚ್.ಕೆ. ರಾಮು, ನಗರ ಜೆಡಿಎಸ್ಅಧ್ಯಕ್ಷ ಕೆ.ಟಿ. ಚಲುವೇಗೌಡ, ಮಾಜಿ ಮೇಯರ್ಆರ್. ಲಿಂಗಪ್ಪ, ಮಾಜಿ ಉಪ ಮೇಯರ್ಕೃಷ್ಣ, ನಗರ ಪಾಲಿಕೆ ಮಾಜಿ ಸದಸ್ಯರಾದ ಎಸ್.ಬಿ.ಎಂ. ಮಂಜು, ರಾಮು, ರಮೇಶ್, ಕೆ.ವಿ. ಶ್ರೀಧರ್, ಪ್ರೇಮಾ ಶಂಕರೇಗೌಡ ಮೊದಲಾದವರು ಇದ್ದರು.ತೈಲದರ ಏರಿಕೆ ಖಂಡಿಸಿ ಎಸ್.ಯು.ಸಿ.ಐ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಮೈಸೂರುರಾಜ್ಯ ಸರ್ಕಾರವು ಇಂಧನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಎಸ್.ಯು.ಸಿಐನ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಪುರುಭವನ ಎದುರಿನ ಡಾ.ಬಿ.ಆರ್. ಅಂಬೇಡ್ಕರ್ಪ್ರತಿಮೆ ಎದುರು ಪ್ರತಿಭಟಿಸಿದರು.
ರಾಜ್ಯ ಸರ್ಕಾರವು ಮಾರಾಟ ತೆರಿಗೆಯನ್ನು ಜೂ. 15 ರಿಂದ ಶೇ. 25.84ಕ್ಕೆ ಹೆಚ್ಚಿಸಿದೆ. ಇದೇ ರೀತಿ ಡೀಸೆಲ್ಮೇಲಿನ ತೆರಿಗೆಯನ್ನು ಶೇ. 14.34 ರಿಂದ ಶೇ. 18.44ಕ್ಕೆ ಏರಿಕೆ ಮಾಡಿದೆ. ಅಂದರೆ ಪ್ರತಿ ಲೀಟರ್ಪೆಟ್ರೋಲ್ಬೆಲೆ 3 ಹಾಗೂ ಡೀಸೆಲ್ಬೆಲೆ 3.5 ರೂ. ಹೆಚ್ಚಾಗಿದೆ. ಈ ಉತ್ಪನ್ನಗಳ ಬೆಲೆ ಏರಿಕೆಯು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಜನ ಜೀವನದ ಮೇಲೆ ಪ್ರಭಾವ ಬೀರಲಿದೆ ಎಂದು ದೂರಿದರು.ರಾಜ್ಯದಲ್ಲಿ ಆಳ್ವಿಕೆ ನಡೆಸಿದ ಬಿಜೆಪಿಯ ಭ್ರಷ್ಟ, ದುರಾಡಳಿತ ತಡೆಯುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಕೂಡ ಅದೇ ಹಾದಿಯಲ್ಲಿ ಸಾಗುತ್ತಿದೆ. ಅಲ್ಲದೆ ಬೆಲೆ ಏರಿಕೆಯ ಸಮರ್ಥನೆಗಾಗಿ ಗ್ಯಾರಂಟಿ ಯೋಜನೆ ಹೆಸರನ್ನು ಮುಂದೆ ತರಲಾಗುತ್ತಿದೆ. ಆದರೆ ವಾಸ್ತವವಾಗಿ ಈ ಸರ್ಕಾರದಲ್ಲಿಯೂ ಭ್ರಷ್ಟಾಚಾರ, ದುಂದುವೆಚ್ಚ ಮುಂದುವರೆದಿದೆ ಎಂದು ಅವರು ಆರೋಪಿಸಿದರು.
ದರ ನಿಯಂತ್ರಣ ನಮ್ಮ ಕೈಯಲ್ಲಿ ಇಲ್ಲ ಎನ್ನುತ್ತಲೇ ತಮಗೆ ಬೇಕಾದಂತೆ ದರ ಇಳಿಸುವ, ಹೆಚ್ಚಳ ಮಾಡಿರುವ ಅನೇಕ ಉದಾಹರಣೆಯನ್ನು ನಾವು ನೋಡಿದ್ದೇವೆ. ಇವೆರಡೂ ಪಕ್ಷಗಳು ಕೂಡ ಪರಸ್ಪರ ಕೆಸರೆರಚಾಟ ಆಡುತ್ತವೆಯೇ ಹೊರತು ಜನಗಳ ಪರವಾದ ನಿಲುವು ತೆಗೆದುಕೊಂಡು ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿವೆ ಎಂದು ದೂರಿದರು.ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ. ರವಿ, ಸದಸ್ಯರಾದ ಉಮಾದೇವಿ, ಚಂದ್ರಶೇಖರ ಮೇಟಿ, ವಿ. ಯಶೋಧರ, ಪಿ.ಎಸ್. ಸಂಧ್ಯಾ, ಸೀಮ, ಹರೀಶ್, ಸುನಿಲ್, ಬಸವರಾಜು ಮೊದಲಾದವರು ಇದ್ದರು.