ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದಿಂದ ಪ್ರತಿಭಟನೆ

| Published : Apr 10 2025, 01:01 AM IST

ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದಿಂದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಹಾಲು, ವಿದ್ಯುತ್, ಡೀಸೆಲ್, ಬಸ್ಸಿನ ದರ ಮತ್ತು ಇತರೆ ವಸ್ತುಗಳ ಬೆಲೆಯನ್ನು ದಿಢೀರ್ ಬೆಲೆ ಏರಿಸಿರುವುದಿಂದ ಕಡು ಬಡವರ, ಕೂಲಿ ಕಾರ್ಮಿಕರ, ರೈತರ ಹಾಗೂ ಮಧ್ಯಮ ವರ್ಗದವರ ಜೀವನದ ಮೇಲೆ ಬರೆ ಎಳೆದಂತಾಗಿದೆ.

ಹಿರೇಕೆರೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ನಂತರ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಅವರು, ರಾಜ್ಯ ಸರ್ಕಾರ ದಿನನಿತ್ಯದ ವಸ್ತುಗಳಾದ ಹಾಲು, ವಿದ್ಯುತ್, ಡೀಸೆಲ್, ಬಸ್ಸಿನ ದರ ಮತ್ತು ಇತರೆ ವಸ್ತುಗಳ ಬೆಲೆಯನ್ನು ದಿಢೀರ್ ಬೆಲೆ ಏರಿಸಿರುವುದಿಂದ ಕಡು ಬಡವರ, ಕೂಲಿ ಕಾರ್ಮಿಕರ, ರೈತರ ಹಾಗೂ ಮಧ್ಯಮ ವರ್ಗದವರ ಜೀವನದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯ ಉಚಿತ ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ಆಡಳಿತಕ್ಕೆ ಬಂದ ಸರ್ಕಾರ ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ವಾಪಸ್ ತೆಗೆದುಕೊಳ್ಳುತ್ತಿದೆ.

ಏಕಾಏಕಿ ಹಂತ- ಹಂತವಾಗಿ ದಿನ ಬಳಕೆಯ ವಸ್ತುಗಳ ಬೆಲೆ ಏರಿಸುತ್ತಿರುವುದರಿಂದ ಬಡವರು ಜೀವನ ನಡೆಸುವುದು ಕಷ್ಟಕರವಾಗಿದೆ. ಬೆಲೆ ಏರಿಕೆಯಿಂದ ಬಡವರು ಬಡವರಾಗಿ ಉಳಿಯುತ್ತಿದ್ದಾರೆ. ಸರ್ಕಾರ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದರೆ ಪ್ರತಿ ಲೀಟರ್ ಹಾಲಿಗೆ ₹10 ಪ್ರೋತ್ಸಾಹ ಧನ ನೀಡಿ, ಹಾಲು ಮತ್ತು ಇತರೆ ವಸ್ತುಗಳ ಬೆಲೆಯನ್ನು ಯಥಾಸ್ಥಿತಿಗೆ ಮುಂದುವರಿಸಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಗಂಗಾಧರಯ್ಯ ಪಾಟೀಲ, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾಬಾಯಿ ಲಮಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಪರಪ್ಪಗೌಡ್ರ, ಜಿಲ್ಲಾ ಉಪಾಧ್ಯಕ್ಷ ಯುಸುಪ್ ಸೈಕಲ್‌ಗಾರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಖಲಂದರ ಎಲೆದಹಳ್ಳಿ, ತಾಲೂಕು ಅಧ್ಯಕ್ಷ ದಾದಾಪೀರ್ ಮಲ್ಲಾಡದ್, ತಾಲೂಕು ಉಪಾಧ್ಯಕ್ಷ ರಾಜು ಸುಂಕದ, ಮಾಲತೇಶ ಬಣಕಾರ, ರಾಜಭಕ್ಷ ಮಾನೇಗಾರ, ರಾಮಚಂದ್ರಪ್ಪ ಹಿಂಡಸಗಟ್ಟಿ, ಈರಪ್ಪ ಅಂಗಡಿ, ಹಬೀಬ ದಾರುಗಾರ, ಸನಾವುಲ್ಲಾ ಪುರದಗೇರಿ, ರಿಜ್ವಾನ್ ಪುರದಗೇರಿ, ಜಾಫರ್ ಕುಡಪಲಿ, ಮಾರುತಿ ದಳವಾಯಿ, ಇರ್ಪಾನ್ ಪುದಗೇರಿ, ನೂರು ಮಕನದಾರ, ಶಫೀ ಹಾವೇರಿ, ತೌಷಿಪ್ ಸೈಕಲಗಾರ, ಸಂಜು ಬಕ್ಕೂರ, ವಾಸೀಮ್ ಕಲಂದರ ಇದ್ದರು.16ರಿಂದ ಸಿಇಟಿ ಪರೀಕ್ಷೆ, ಸಕಲ ಸಿದ್ಧತೆ

ಹಾವೇರಿ: ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಏ. 16 ಮತ್ತು 17ರಂದು ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶಗಳು ನಡೆಯಲಿದೆ. ಅದರಂತೆ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ 4,587 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಎದುರಿಸುವರು. ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.ಪರೀಕ್ಷೆಗಳು ನಡೆಯುವ ದಿನಾಂಕದಂದು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಕಾರ್ಯದಲ್ಲಿ ಭಾಗವಹಿಸುವ ಎಲ್ಲ ಅಧಿಕಾರಿ, ಸಿಬ್ಬಂದಿ ಹಾಗೂ ಕೊಠಡಿ ಮೇಲ್ವಿಚಾರಕರು ನಿಗದಿತ ಸಮಯದಲ್ಲಿ ಹಾಜರಿರಲು ಹಾಗೂ ವಹಿಸುವ ಕರ್ತವ್ಯವನ್ನು ಚಾಚೂ ತಪ್ಪದೆ ಲೋಪದೋಷಗಳಿಲ್ಲದೆ ನಿರ್ವಹಿಸಲು ಸೂಚಿಸಲಾಗಿದೆ ಎಂದರು.ಪರೀಕ್ಷೆಯ ನಡೆಯುವ ಕೇಂದ್ರಗಳ ಸುತ್ತು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ಕ್ರಮ ವಹಿಸಲಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.