ಸಾರಾಂಶ
ಸಮರ್ಪಕ ಕುಡಿಯುವ ನೀರು ಪೂರೈಸಲು ಒತ್ತಾಯಿಸಿ ಇಡಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಮೂಲಂಗಿ ಗ್ರಾಮಸ್ಥರು ಶನಿವಾರ ಖಾಲಿ ಕೊಡಗಲೊಂದಿಗೆ ಬಂದು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ಸಮರ್ಪಕ ಕುಡಿಯುವ ನೀರು ಪೂರೈಸಲು ಒತ್ತಾಯಿಸಿ ಇಡಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಮೂಲಂಗಿ ಗ್ರಾಮಸ್ಥರು ಶನಿವಾರ ಖಾಲಿ ಕೊಡಗಲೊಂದಿಗೆ ಬಂದು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.ತಾಲೂಕಿನ ಚಿಕ್ಕಮೂಲಂಗಿ ಗ್ರಾಮಕ್ಕೆ ಕಳೆದು ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿದ್ದು, ಗ್ರಾಮ ಪಂಚಾಯತಿದವರು ಖಾಸಗಿ ಕೊಳವೆ ಬಾವಿಯಿಂದ ನೀರು ಪೂರೈಕೆ ಮಾಡಲು ಒಡಂಬಡಿಕೆ ಮಾಡಿಕೊಂಡಿದ್ದರು. ಆದರೆ, ಗ್ರಾಮ ಪಂಚಾಯತಿ ಸಿಬ್ಬಂದಿಯ ನಿರ್ಲಕ್ಷದಿಂದ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆಯಾಗಿದ್ದು, ಸಮರ್ಪಕ ನೀರು ಪೂರೈಸಲು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಂಗಡಿ ಹಾಗೂ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಳೆಯಿಂದ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು ಪೂರೈಕೆ ಮಾಡುವ ಭರವಸೆ ನೀಡಿದ ನಂತರ ಗ್ರಾಮಸ್ಥರು ಪಂಚಾಯತಿಗೆ ಹಾಕಿದ ಬೀಗ ತೆಗೆದು ಎಂದಿನಂತೆ ಕೆಲಸ ಮಾಡಲು ಅವಕಾಶ ನೀಡಿದರು.ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಕಮಲವ್ವ ಮಾದರ, ತುಕಾರಾಮ ಅಪ್ಪೋಜಿ, ಹನಮಂತ ಅಪ್ಪೋಜಿ,ಸಿದ್ದಪ್ಪ ಕರೆನ್ನವರ, ಕಲ್ಲಪ್ಪ ಕುರುವಿನಕೊಪ್ಪ, ಮೈಲಾರಿ ಗುದಗಿ ಸೇರಿದಂತೆ ಚಿಕ್ಕಮೂಲಂಗಿ ಗ್ರಾಮಸ್ಥರು ಭಾಗವಹಿಸಿದ್ದರು.