ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

| Published : Jun 07 2024, 12:31 AM IST

ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೆದ್ದಾರಿ ಸೇತುವೆ ಮೇಲೆ ನಡೆಸುತ್ತಿರುವ ಡಾಂಬರೀಕರಣ ಕಾಮಗಾರಿ ಕಳಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ. ಸೇತುವೆ ಜೋಡಣೆ ಮಾಡಿರುವ ಮಧ್ಯ ಭಾಗದಲ್ಲಿ ಹಳ್ಳ, ಗುಂಡಿಗಳ ಬಿಟ್ಟು ರಸ್ತೆ ಡಾಂಬಾರೀಕರಣ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಸುತ್ತಿರುವ ಡಾಂಬರೀಕರಣ ಕಳಪೆ ಹಾಗೂ ಅವೈಜ್ಞಾನಿಕವಾಗಿ ಎಂದು ಆರೋಪಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣ ಸಮೀಪದ ಕಾವೇರಿ ಸೇತುವೆ ಹೆದ್ದಾರಿಯಲ್ಲಿ ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು, ಗುಣಮಟ್ಟದ ಕಾಮಗಾರಿ ನಡೆಸದ ಗುತ್ತಿಗೆದಾರ ಹಾಗೂ ಸಂಬಂಧಪಟ್ಟ ಇಲಾಖೆ ವಿರುದ್ಧ ಘೋಷಣೆ ಕೂಗಿದರು.

ದಕ್ಷಿಣ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೆದ್ದಾರಿ ಸೇತುವೆ ಮೇಲೆ ನಡೆಸುತ್ತಿರುವ ಡಾಂಬರೀಕರಣ ಕಾಮಗಾರಿ ಕಳಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ. ಸೇತುವೆ ಜೋಡಣೆ ಮಾಡಿರುವ ಮಧ್ಯ ಭಾಗದಲ್ಲಿ ಹಳ್ಳ, ಗುಂಡಿಗಳ ಬಿಟ್ಟು ರಸ್ತೆ ಡಾಂಬಾರೀಕರಣ ಮಾಡಲಾಗುತ್ತಿದೆ ಎಂದು ದೂರಿದರು.

ರಸ್ತೆಯಲ್ಲಿ ಚಲಿಸುವ ವಾಹನ ಸವಾರರು ಬ್ರೇಕ್ ಹಾಕುವುದು ಹಾಗೂ ಹಳ್ಳಗಳನ್ನು ತಪ್ಪಿಸಲು ಮುಂದಾದರೆ ಹಿಂಬದಿಯಿಂದ ಬರುವ ವಾಹನಗಳ ಸವಾರರ ಅರಿವಿಲ್ಲದೆ ಡಿಕ್ಕಿ ಹೊಡೆಯುವ ಸಂಭವ ಹೆಚ್ಚಾಗಿದೆ. ಜೊತೆಗೆ ಇಡೀ ಸೇತುವೆ ಜೋಡಣೆ ಮಾಡಿರುವ ಮಧ್ಯದಲ್ಲಿ ಡಾಂಬರ್ ಹಾಕದೆ ಇರುವುದರಿಂದ ಈಗಾಗಲೇ ಹಲವು ವಾಹನಗಳಿಗೆ ಅಪಘಾತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹಳ್ಳ ಬಿಟ್ಟಿರುವ ಸೇತುವೆ ಜೋಡಣೆಗಳನ್ನು ಸರಿಪಡಿಸಿ, ವ್ಶೆಜ್ಞಾನಿಕವಾಗಿ ಡಾಂಬರೀಕರಣ ನಡೆಸುವಂತೆ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಹೆಚ್.ಜಗದೀಶ್, ಆಟೋ ಚಾಲಕರಾದ ಶ್ರೀನಿವಾಸ್, ಜಯರಾಮೇಗೌಡ, ಕಾರ್ತಿಕ್ ಸೇರಿದಂತೆ ಇತರರು ಇದ್ದರು.

ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಮಂಡ್ಯ:ತಾಲೂಕಿನ ವಿ.ಸಿ.ಫಾರ್ಮ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜೂ.19ರಂದು ಸ್ವಂತ ಉದ್ಯಮ ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ನಡೆಯುವ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು. ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.ಅಸಕ್ತ ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಅರ್ಜಿಯನ್ನು ಜೂನ್ 17ರೊಳಗೆ ಮಂಡ್ಯ ಜಿಲ್ಲಾ ಕೈಗಾರಿಕಾ ಕೇಂದ್ರ ಸಿಡಾಕ್ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಮೊ-9008194396 ನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.