ಕ್ಷೇತ್ರದ ನೀರಾವರಿ, ರಸ್ತೆ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಅನೇಕ ಯೋಜನೆ ಅಗತ್ಯ
ಕೊಪ್ಪಳ: ಶಾಸಕ ಕೆ.ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ನೀಡಿಲ್ಲ ಎಂದು ಆರೋಪಿಸಿ ನಗರದ ಅಶೋಕ ವೃತ್ತದಲ್ಲಿ ಅವರ ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್, ಸಿಎಂ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ನೀಡಬೇಕು. ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕೊಪ್ಪಳ ಕ್ಷೇತ್ರಕ್ಕೆ ಸಹ ಅನ್ಯಾಯವಾಗಿದೆ. ಕೊಪ್ಪಳಕ್ಕೆ ನ್ಯಾಯಬೇಕು, ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ನೀಡಬೇಕು, ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಘೋಷಣೆ ಕೂಗಿದರು. ಜತೆಗೆ ಸಿಎಂ ಡಿಕೆಶಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕ್ಷೇತ್ರದ ನೀರಾವರಿ, ರಸ್ತೆ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಅನೇಕ ಯೋಜನೆ ಅಗತ್ಯವಿದ್ದು, ಸಚಿವ ಸ್ಥಾನ ದೊರೆತಿದ್ದರೆ ಈ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗುತ್ತಿತ್ತು. ಸಚಿವ ಸ್ಥಾನ ನೀಡದಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುವ ಆತಂಕ ವ್ಯಕ್ತವಾಗಿದೆ ಎಂದು ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಗವಿ ಜಂತಕಲ್, ವೀರಣ್ಣ ಸಂಡೂರು, ಮಲ್ಲು ಪೂಜಾರ, ಚೆನ್ನಪ್ಪ ಕೋಟ್ಯಾಳ ಇತರರಿದ್ದರು.ನನಗೆ ಸಚಿವ ಸ್ಥಾನ ದೊರೆಯದೇ ಇರುವುದಕ್ಕೆ ತುಂಬಾ ನೋವಾಗಿದೆ. ಈ ಬಾರಿ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿತ್ತು. ಆದರೆ ಅದು ಆಗಲೇ ಇಲ್ಲ. ಈ ಕುರತು ನಾನು ಹೆಚ್ಚು ಹೇಳುವುದಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ತಿಳಿಸಿದ್ದಾರೆ.