ವಿವಿಧ ಹಲ್ಲೆ ಘಟನೆಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

| Published : Jan 13 2024, 01:34 AM IST

ವಿವಿಧ ಹಲ್ಲೆ ಘಟನೆಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ ಗೇರುಮರಡಿ. ಮೂಡಿಗೆರೆಯಲ್ಲಿ ಯುವಕರ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಚಿಕ್ಕಮಗಳೂರಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ಬಣಕಲ್ ಮುಸ್ಲಿಂ ಯುವಕರಿಗೆ ಬಸ್ ನಿಲ್ದಾಣದಲ್ಲಿ ಹಲ್ಲೆ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿಲ್ಲ , ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ತರೀಕೆರೆ ತಾಲೂಕಿನ ಗೇರಮರಡಿ ಹಾಗೂ ಮೂಡಿಗೆರೆ ಪಟ್ಟಣದಲ್ಲಿ ಯುವಕರ ಮೇಲೆ ನಡೆದಿರುವ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಧರಣಿ ನಡೆಸಿದವು.

ಬಣಕಲ್ ಮುಸ್ಲಿಂ ಯುವಕರಿಗೆ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿಲ್ಲ ಹಾಗೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಮಾತನಾಡಿದ ದಲಿತ ಮುಖಂಡ ದಂಟರಮಕ್ಕಿ ಶ್ರೀನಿವಾಸ್, ಜಿಲ್ಲೆಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಿದರೆ ಘೇರಾವ್ ಹಾಕುವ ಎಚ್ಚರಿಕೆ ನೀಡಿದರು.

ತಿಭಟನೆ ಉದ್ದೇಶಿಸಿ ಮಾತನಾಡಿದ ಬಿಎಸ್ಪಿ ಮುಖಂಡ ಕೆ.ಟಿ. ರಾಧಾಕೃಷ್ಣ, ನಾವು ಮೊದಲು ಸಂವಿಧಾನ ಜಾರಿಗೊಳಿಸಿ ಎಂದು ಪ್ರತಿಭಟನೆ ಮಾಡುತ್ತಿದ್ದೆವು ಇಂದು ಸಂವಿಧಾನ ಉಳಿಸಿ ಎಂದು ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜ.1 ರಂದು ತರೀಕೆರೆ ಗೊಲ್ಲರಹಟ್ಟಿಯಲ್ಲಿ ಜಾತಿನಿಂದನೆ ಮಾಡಿ ಹಲ್ಲೆ ಮಾಡಿರುವುದು ಖಂಡನೀಯ ಹಾಗೂ ಪೊಲೀಸರು ಸುಮಾರು 15 ಜನ ಆರೋಪಿಗಳ ಮೇಲೆ ಮಾತ್ರ ಕೇಸು ದಾಖಲಿಸಿದ್ದು, ನಾಲ್ಕು ಆರೋಪಿಗಳನ್ನು ಬಂಧಿಸಿ ಉಳಿದ ಆರೋಪಿ ಗಳನ್ನು ಬಂಧಿಸದೆ ಇರುವುದು ಪರೋಕ್ಷವಾಗಿ ಆರೋಪಿಗಳಿಗೆ ರಕ್ಷಣೆ ನೀಡಿದಂತೆ ಕಾಣುತ್ತಿದ್ದು, ಆರೋಪಿಗಳನ್ನು ಈ ಕೂಡಲೆ ಬಂಧಿಸಬೇಕು ಒತ್ತಾಯಿಸಿದ ಅವರು, ಹಲ್ಲೆಗೊಳಗಾದ ವ್ಯಕ್ತಿಗೆ ರಕ್ಷಣೆ ನೀಡುವ ಜತೆಗೆ ಪರಿಹಾರ ಹಣ ನೀಡ ಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹೊನ್ನೇಶ್‌, ಹರೀಶ್‌ ಮಿತ್ರಾ, ಲಕ್ಷ್ಮಣ್‌ ಹುಣಸೇಮಕ್ಕಿ, ಗೌಸ್‌ ಮುನೀರ್‌ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಜರಿದ್ದರು. 12 ಕೆಸಿಕೆಎಂ 3

ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ನಡೆದಿರುವ ಹಲ್ಲೆ ಘಟನೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಆಜಾದ್‌ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಧರಣಿ ನಡೆಸಿದರು.