ಸೇವಾ ನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಎನ್ನುವುದನ್ನು ತಡೆದುಗೊಳಿಸಿ ಸಡಿಲಗೊಳಿಸಬೇಕು ಎಂಬ ಪ್ರಮುಖ ಬೇಡಿಕೆ ಜೊತೆಗೆ ಸುಪ್ರೀಂ ಕೋರ್ಟ್ ಆದೇಶ ಪುನರ್ ಪರಿಶೀಲಿಸಿ ಕಾನೂನು ಹೋರಾಟ ಮತ್ತು ಸರ್ಕಾರ ಹಾಲಿ ಇರುವ ಶಿಕ್ಷಕರಿಗೆ ನ್ಯಾಯ ಒದಗಿಸಲು ಸೂಕ್ತ ಕಾನೂನು ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಸೇವಾ ನಿರತ ಶಿಕ್ಷಕರಿಗೆ ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಿರುವ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಿಂದ ಪಾರಾಗಲು ಸೂಕ್ತ ಕಾನೂನು ತಿದ್ದುಪಡಿ ತಂದು ನ್ಯಾಯ ಒದಗಿಸಲು ಆಗ್ರಹಿಸಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರು ಗುರುವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.ಅಖಿಲ ಭಾರತ ಶಿಕ್ಷಕರ ಸಂಘಟನೆಯ ಜಂಟಿ ಕ್ರಿಯಾ ಸಮಿತಿ ಹೋರಾಟಕ್ಕೆ ಬೆಂಬಲಿಸಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ದೇವರಾಜು ನೇತೃತ್ವದಲ್ಲಿ ತಾಲೂಕಿನ 225 ಪ್ರಾಥಮಿಕ ಶಾಲೆಗಳ 565 ಶಿಕ್ಷಕರು ಕಪ್ಪುಪಟ್ಟಿ ಧರಿಸಿ ತರಗತಿಗಳಲ್ಲಿ ಪಾಠ ಮಾಡುವ ಮೂಲಕ ಬೆಂಬಲ ಸೂಚಿಸಿದರು.
ಸೇವಾ ನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಎನ್ನುವುದನ್ನು ತಡೆದುಗೊಳಿಸಿ ಸಡಿಲಗೊಳಿಸಬೇಕು ಎಂಬ ಪ್ರಮುಖ ಬೇಡಿಕೆ ಜೊತೆಗೆ ಸುಪ್ರೀಂ ಕೋರ್ಟ್ ಆದೇಶ ಪುನರ್ ಪರಿಶೀಲಿಸಿ ಕಾನೂನು ಹೋರಾಟ ಮತ್ತು ಸರ್ಕಾರ ಹಾಲಿ ಇರುವ ಶಿಕ್ಷಕರಿಗೆ ನ್ಯಾಯ ಒದಗಿಸಲು ಸೂಕ್ತ ಕಾನೂನು ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.ಹಳೆ ಪಿಂಚಣಿ ಯೋಜನೆ ಜಾರಿಗೆ, ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಕೈ ಬಿಟ್ಟು ಕಾಯಂ ಶಿಕ್ಷಕರ ನೇಮಕ ಮಾಡಬೇಕು ಹಾಗೂ ಎಲ್ಲಾ ಶಿಕ್ಷಕರಿಗೆ ಏಕರೂಪ ವೇತನ ನೀಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದೆ ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜು ತಿಳಿಸಿದರು.