ಅಕ್ಕಪಕ್ಕದ ದೇಶಗಳಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಯಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು.
ವಿಜಯಪುರ:
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಸರಣಿ ಹತ್ಯೆ, ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತಾಲೂಕು ಸಮಿತಿ ವತಿಯಿಂದ ಪಟ್ಟಣದ ಅಂಕತಟ್ಟಿ ನಂಜುಂಡಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾಕಾರರು ಬಾಂಗ್ಲಾದೇಶದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಕ್ಕಪಕ್ಕದ ದೇಶಗಳಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಯಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು.ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗೆ ಆಗ್ರಹ;ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಜರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ, ಬಾಂಗ್ಲಾ ಮತ್ತು ಪಾಕಿಸ್ತಾನಗಳಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ, ಬಲವಂತದ ಮತಾಂತರ ಮತ್ತು ಹತ್ಯೆಗಳಂತಹ ಅಮಾನವೀಯ ಕೃತ್ಯಗಳು ಹೆಚ್ಚುತ್ತಿವೆ. ವಿಶ್ವಸಂಸ್ಥೆ ಮತ್ತು ಭಾರತ ಸರ್ಕಾರ ಸಂಬಂಧಿತ ದೇಶಗಳ ಮುಖ್ಯಸ್ಥರ ಜೊತೆ ಚರ್ಚಿಸಿ, ಅಲ್ಲಿನ ಹಿಂದೂಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.ಅಕ್ರಮ ವಲಸಿಗರನ್ನು ಹೊರಹಾಕಿ:ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಿರುವ ಭದ್ರತೆ ಮತ್ತು ಸೌಲಭ್ಯಗಳು ಆ ದೇಶಗಳಲ್ಲಿರುವ ಹಿಂದೂಗಳಿಗೂ ಸಿಗುವಂತಾಗಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಬಾಂಗ್ಲಾದೇಶದ ಮುಸ್ಲಿಮರು ಅಕ್ರಮವಾಗಿ ನೆಲೆಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಇವರನ್ನು ಪತ್ತೆಹಚ್ಚಿ ತಕ್ಷಣವೇ ಅವರ ದೇಶಕ್ಕೆ ವಾಪಸ್ ಕಳುಹಿಸಬೇಕು ಎಂದು ಅವರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ನಾಗೇಂದ್ರ, ಶಾಮಣ್ಣ, ರವಿ, ಚಂದನ್, ಸಾಗರ್ ಹಾಗೂ ಬಜರಂಗದಳದ ಪದಾಧಿಕಾರಿಗಳಾದ ಬಲರಾಮ್, ಮಹೇಶ್ ಬಾಬು, ಮಣಿ, ಮುನಿಕೃಷ್ಣ, ರಾಹುಲ್, ಎಬಿವಿಪಿಯ ಮನೋಜ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.