ಸಾರಾಂಶ
ಸವಣೂರು: ಪಟ್ಟಣದ ತಾಲೂಕು ಪಶು ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ರೈತ ಸಂಘಟನೆ ಪದಾಧಿಕಾರಿಗಳ ನೇತೃತ್ವದಲ್ಲಿ ರೈತರು ಇತ್ತೀಚೆಗೆ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ಕೈಗೊಂಡರು.ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಸಿಬ್ಬಂದಿ ಚಿಕಿತ್ಸೆ ನೀಡುತ್ತಾರೆ. ಔಷಧಿಗಳನ್ನು ಹೊಗಡೆಯಿಂದ ತೆಗೆದುಕೊಂಡು ಬರುವಂತೆ ಹೇಳುತ್ತಾರೆ.
ಒಟ್ಟಾರೆ ಆಸ್ಪತ್ರೆಯಲ್ಲಿ ಯಾವುದೇ ಸೌಲಭ್ಯ ನೀಡಲು ವೈದ್ಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ರೈತರ ಸಮಸ್ಯೆಗೆ ಪರಿಹಾರ ನೀಡಲು ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು.ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ರವಿಕುಮಾರ ಕೊರವರ ರೈತರೊಂದಿಗೆ ಮಾತನಾಡಿ, ಸಮಸ್ಯೆ ಆಲಿಸಿದರು. ನಂತರ ಪಶು ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೆ ಎಚ್ಚರಿಕೆ ನೀಡಿ, ರೈತರ ಜಾನುವಾರುಗಳಿಗೆ ಪಶು ವೈದ್ಯರೇ ಪರಿಶೀಲಿಸಿ ಚಿಕಿತ್ಸೆ ನೀಡಬೇಕು. ರೈತರು ಸಂಕಷ್ಟವನ್ನು ಹೇಳಿಕೊಳ್ಳುವ ಮೊದಲು ಸರ್ಕಾರದ ಸೌಲಭ್ಯಗಳ ಅಡಿಯಲ್ಲಿ ಸೇವೆಯನ್ನು ನೀಡಲು ಸೂಚಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕ ಪದಾಧಿಕಾರಿಗಳು, ರೈತರು ಪಾಲ್ಗೊಂಡಿದ್ದರು.ವಿದ್ಯಾರ್ಥಿಗಳು ಓದಿನಷ್ಟೇ ಕ್ರೀಡೆಗೂ ಪ್ರಾಮುಖ್ಯ ನೀಡಲಿರಾಣಿಬೆನ್ನೂರು: ವಿದ್ಯಾರ್ಥಿಗಳು ಓದಿನಷ್ಟೇ ಕ್ರೀಡೆಗೂ ಪ್ರಾಮುಖ್ಯತೆಯನ್ನು ಕೊಡಬೇಕು ಎಂದು ಪ್ರಸಕ್ತ ಸಾಲಿನ ಐಎಎಸ್ ಪರೀಕ್ಷೆ ಪಾಸು ಮಾಡಿರುವ ಕೊಡಿಯಾಲ ಹೊಸಪೇಟೆ ಗ್ರಾಮದ ಸಚಿನ ಪೂಜಾರ ತಿಳಿಸಿದರು.ತಾಲೂಕಿನ ಹುಲಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕವಲೆತ್ತು ಮಂಡಲ ಮಟ್ಟದ 2025- 2026ನೇ ಸಾಲಿನ ಕ್ರೀಡಾಕೂಟದಲ್ಲಿ ಮಾತನಾಡಿದರು. ಸೋಲು- ಗೆಲುವಿಗಿಂತ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು.
ಕ್ಷೇತ್ರ ಶಿಕ್ಷಣಧಿಕಾರಿ ಶಾಮಸುಂದರ ಅಂಗಡಿ ಮಾತನಾಡಿದರು. ಸಿದ್ದಪ್ಪ ಮೆಗಳಗೇರಿ, ಗ್ರಾಪಂ ಉಪಾಧ್ಯಕ್ಷೆ ಶಶಿಕಲಾ ಕೋಟೆಗೌಡ್ರ, ಸದಸ್ಯರಾದ ಭೀಮಪ್ಪ ಕುಡಪಲಿ ಕರಿಯಪ್ಪ ಮಸಲಾಡದ, ಶಿಲ್ಪಾ ಭಟ್ಟಂಗಿ, ಕೊಟ್ರೇಶ ಬಣಕಾರ, ಕ್ಷೇತ್ರ ಸಮನ್ವಯ ಅಧಿಕಾರಿ ಮಂಜನಾಯ್ಕ, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಪ್ರಭಾಕರ ಚಿಂದಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ವಿ. ಅಡಿವೆರ, ಇಸಿಒ ಗುಂಜಾಳದ, ಪಿಡಿಒ ಗೀತಾ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರುಗೌಡ ಕೆಂಚನಗೌಡ್ರ, ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ ಬಣಕಾರ, ರಾಜು ಉಕ್ಕುಂದ, ಚಂದ್ರಪ್ಪ ಬಣಕಾರ ಮತ್ತಿತರರಿದ್ದರು.