ಗದಗ: ಸ್ಲಂ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ, ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ನಗರದ ಹೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ಅವಳಿ ನಗರದ ಕೊಳಗೇರಿ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಲಂ ನಿವಾಸಿಗಳಿಂದ ವಿನಾಕಾರಣ ದಾಖಲೆಗಳನ್ನು ಕೇಳುತ್ತಿರುವುದರಿಂದ ಜನರು ಪ್ರತಿನಿತ್ಯ ಹೆಸ್ಕಾಂ ಕಚೇರಿಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ನಿರಾಕ್ಷೇಪಣಾ ಪತ್ರ ಸಲ್ಲಿಸಿದರೂ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ಸ್ಲಂ ಪ್ರದೇಶದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಈ ವೇಳೆ ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ಮಲ್ಲೇಶ ಕಿರೇಶೂರ, ಮುನ್ನಾ ಅಗಡಿ, ಖಾಜಾಸಾಬ ಇಸ್ಮಾಯಿಲನವರ, ಸಕ್ರುಬಾಯಿ ಗೋಸಾವಿ, ಸಲೀಂ ಹರಿಹರ, ಗೌಸಸಾಬ ಅಕ್ಕಿ, ರಿಜ್ವಾನ ಮುಲ್ಲಾ, ರೇಷ್ಮಾ ನಾಗನೂರು, ರವಿ ಗೋಸಾವಿ, ಖಾಜಾಸಾಬ ಬಳ್ಳಾರಿ, ಹುಸೇನ ಮುಲ್ಲಾನವರ, ರಫೀಕ ಬರದೂರು, ಪರಶುರಾಮ ಗೌಳಿ, ಖಾಜಾಸಾಬ ಉಮಚಗಿ, ಮಲೇಶಪ್ಪ ಕಲಾಲ, ಮೆಹಬೂಬ ಮುಲ್ಲಾ ಹಾಗೂ ನಗರದ ವಿವಿಧ ಸ್ಲಂ ಪ್ರದೇಶದ ಜನರು ಇದ್ದರು.ಡೆಂಘೀ ಹರಡದಂತೆ ಮುಂಜಾಗ್ರತೆ ವಹಿಸಿ
ಗದಗ: ನಿರ್ದಿಷ್ಟ ಚಿಕಿತ್ಸೆ ಇಲ್ಲದ ಡೆಂಘೀ ಜ್ವರಕ್ಕೆ ಮುಂಜಾಗ್ರತೆಯೇ ಪರಮೌಷಧಿ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.ತಾಲೂಕಿನ ನಾಗಾವಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಐಇಸಿ ವಿಭಾಗದ ವತಿಯಿಂದ ನಡೆದ ಡೆಂಘೀ ವಿರೋಧಿ ಮಾಸಾಚರಣೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮನೆಯಲ್ಲಿ ನೀರಿಗಾಗಿ ಬಳಸುವ ನೀರಿನ ಪರಿಕರಗಳನ್ನು ಪರಿಶೀಲಿಸಬೇಕು. ಲಾರ್ವಾ ಸೊಳ್ಳೆ ಮರಿಗಳು ಕಂಡುಬಂದರೆ ಸ್ವಚ್ಛಗೊಳಿಸಬೇಕು. ನೀರಿನ ಪರಿಕರಗಳನ್ನು ಭದ್ರವಾಗಿ ಮುಚ್ಚಿಡಬೇಕು. ಹಾಗೆಯೇ ಸೊಳ್ಳೆಗಳು ಬೆಳೆಯಲು ಪೂರಕವಾಗಿರುವ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವುದರಿಂದ ಮಾರಕ ರೋಗಗಳಿಂದ ದೂರ ಇರಬಹುದು ಎಂದರು.ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಸಿ. ಕರಡಿಗುಡ್ಡ ಮಾತನಾಡಿ, ಡೆಂಘೀ ಜ್ವರದ ಲಕ್ಷಣಗಳು ಹಾಗೂ ಸ್ವಯಂ ರಕ್ಷಣಾ ವಿಧಾನಗಳ ಕುರಿತು ಹಾಗೂ ಕಲುಷಿತ ಆಹಾರ, ನೀರಿನಿಂದ ಹರಡಬಹುದಾದ ಕಾಯಿಲೆಗಳ ಬಗ್ಗೆ ಹಾಗೂ ಮುನ್ನಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಶಿಕ್ಷಣ ನೀಡಿದರು.ಈ ವೇಳೆ ಮುಖ್ಯ ಶಿಕ್ಷಕಿ ಜೆ.ಆರ್. ಏಕಬೋಟೆ, ಸಹ ಶಿಕ್ಷಕಿಯರಾದ ಎ.ಎ. ಬಂಡಿವಾಡಮಠ, ಜೆ.ಎಂ. ಮುತ್ತಿನಪೆಂಡಿಮಠ, ಎಂ.ಎಂ. ಬಾಗಲಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಎಲ್. ಹಬೀಬ ಹಾಗೂ ವಿದ್ಯಾರ್ಥಿಗಳು ಇದ್ದರು.