ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ

| Published : Apr 22 2025, 01:51 AM IST

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜನರು ಭಯಭೀತಿಯಿಂದ ಬದುಕುವ ಪರಿಸ್ಥಿತಿ ಎದುರಾಗಿದೆ. ತಕ್ಷಣವೇ ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಖಂಡಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಿಕ್ಕಿ ರೈ ಮೇಲಿನ ಗುಂಡಿನ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದರು. ತಪ್ಪಿತಸ್ಥರನ್ನು ಬಂಧಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ರಿಕ್ಕಿರೈತ ಹತ್ಯೆಗೆ ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ರಿಕ್ಕಿ ರೈಗೆ ಸರ್ಕಾರದಿಂದ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜನರು ಭಯಭೀತಿಯಿಂದ ಬದುಕುವ ಪರಿಸ್ಥಿತಿ ಎದುರಾಗಿದೆ. ತಕ್ಷಣವೇ ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘಟನೆ ರವೀಂದ್ರ, ಬಸವರಾಜ, ಅಭಿ, ಪುಟ್ಟಸ್ವಾಮಿ, ಅಕ್ಷಯ್ ಭಾಗವಹಿಸಿದ್ದರು.

ಇಂದು ದೊಡ್ಡಾಬಾಲ ಗ್ರಾಮಕ್ಕೆ ಸಿಎಂ ಭೇಟಿ

ನಾಗಮಂಗಲ: ತಾಲೂಕಿನ ದೊಡ್ಡಾಬಾಲ ಗ್ರಾಮದಲ್ಲಿ ಏ.22 ರಂದು 39 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಹುಚ್ಚಪ್ಪಸ್ವಾಮಿ ಹಾಗೂ 14 ಕೂಟಗಳ ದೇವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ತಾಲೂಕಿನ ಅದ್ದೀಹಳ್ಳಿ ಸರ್ಕಲ್‌ನ ಎಪಿಎಂಸಿ ಆವರಣದಲ್ಲಿ ನಿರ್ಮಿಸಿರುವ ತಾತ್ಕಾಲಿಕ ಹೆಲಿಪ್ಯಾಡ್‌ಗೆ ಬಂದಿಳಿಯುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಭೈರತಿ ಸುರೇಶ್ ಅವರಿಗೆ ಪಕ್ಷದಿಂದ ಸ್ವಾಗತ ಕೋರಲಾಗುವುದು ಎಂದರು. ಈ ವೇಳೆ ಜಿಪಂ ಮಾಜಿ ಸದಸ್ಯ ಎಂ.ಪ್ರಸನ್ನ ಇದ್ದರು.