ಸಾರಾಂಶ
ರಾಜ್ಯಾದ್ಯಂತ ಏಕ ಕಾಲದಲ್ಲಿ ಎರಡನೇ ಹಂತದ ಪ್ರತಿಭಟನೆ: ರವೀಂದ್ರ
ಕನ್ನಡಪ್ರಭ ವಾರ್ತೆ, ಕಡೂರುಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ 2 ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರದ ಭಾಗವಾಗಿ ಮಂಗಳವಾರವೂ ಪ್ರತಿಭಟನೆ ಮುಂದುವರಿಯಿತು.ಮಂಗಳವಾರ ಪಟ್ಟಣದತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ತಾಲುಕು ಘಟಕದಿಂದ ಬೇಡಿಕೆಗಳ ಈಡೇರಿಕೆಗೆ ನಡೆಸುತ್ತಿರುವ ಧರಣಿಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಎಸ್.ಕೆ. ರವೀಂದ್ರ ಮಾತನಾಡಿ, ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 2024 ರ ಸೆಪ್ಟೆಂಬರ್ ನಲ್ಲಿ ಮೊದಲ ಹಂತದ ಮುಷ್ಕರ ನಡೆಸಿದ ಸಂದರ್ಭದಲ್ಲಿ ರಾಜ್ಯ ಸರಕಾರ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿತ್ತು. ಆದರೆ ಈವರೆಗೂ ಯಾವುದೇ ಬೇಡಿಕೆ ಈಡೇರಿಸಿಲ್ಲ. ನಮ್ಮ ಹಕ್ಕಿ ಗಾಗಿ ಪ್ರತಿಭಟನೆ ಅನಿವಾರ್ಯವಾಗಿರುವ ಕಾರಣ ರಾಜ್ಯ ಸಂಘಟನೆ ಕರೆಯ ಮೇರೆಗೆ ರಾಜ್ಯಾದ್ಯಂತ ಏಕ ಕಾಲದಲ್ಲಿ ಎರಡನೇ ಹಂತದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಸಾರ್ವಜನಿಕರಿಗೆ ನೇರವಾಗಿ ಸೇವೆ ನೀಡುವ ಗ್ರಾಮಾಡಳಿತ ಅಧಿಕಾರಿಗಳಿಗೆ ಕಚೇರಿ ಸೌಲಭ್ಯ, ಮಹಿಳಾ ಗ್ರಾಮ ಆಡಳಿತಾಧಿ ಕಾರಿಗಳಿಗೆ ಸುರಕ್ಷತಾ ಸೌಲಭ್ಯ, ಕುಟುಂಬದೊಂದಿಗೆ ನೆಮ್ಮದಿ ಜೀವನ ಸಾಗಿಸಲು ಅಂತರ ಜಿಲ್ಲಾ ವರ್ಗಾವಣೆ, ಬಡ್ತಿ ನೀಡುವ ಬಗ್ಗೆ ಹಾಗೂ ಸರಕಾರದ ಎಲ್ಲ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಗ್ರಾಮ ಆಡಳಿತಾಧಿಕಾರಿಗಳಿಗೆ ಕಾನೂನು ರಕ್ಷಣೆ ಮತ್ತು ಮೇಲಾಧಿಕಾರಿಗಳ ಶೋಷಣೆ ನಿಲ್ಲಿಸುವ ಜೊತೆಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.ಕಂದಾಯ ಇಲಾಖೆ ಕಾರ್ಯಕ್ರಮಗಳ ಯೋಜನೆಗಳನ್ನು ತಳಮಟ್ಟದಲ್ಲಿ ಅನುಷ್ಟಾನಗೊಳಿಸುವ ಹೊಣೆಗಾರಿಕೆ ಗ್ರಾಮ ಆಡಳಿತ ಅಧಿಕಾರಿಗಳದ್ದಾಗಿದೆ. ಆದರೆ ಸರಕಾರ ಮೂಲ ಸೌಕರ್ಯ ಕಲ್ಪಿಸುವಲ್ಲಿ ಹಿಂದೇಟು ಹಾಕುತ್ತಿದೆ. ಮೊಬೈಲ್, ಲ್ಯಾಪ್‍ಟ್ಯಾಪ್ ಮತ್ತು ಡೇಟಾ ಪ್ಯಾಕ್‍ಗಳನ್ನು ನೀಡಿಲ್ಲ. ಸರಕಾರದ ಯೋಜನೆಗಳನ್ನು ಸ್ವಂತ ಖರ್ಚಿನಲ್ಲಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಲ್ಯಾಂಡ್ ಬೀಟ್, ಆಧಾರ್ ಸೀಡಿಂಗ್ ಪವತಿ ಖಾತೆ ಅಭಿಯಾನ ಸೇರಿದಂತೆ ನಾನಾ ಕಾರ್ಯಕ್ರಮಮಾಡಲಾಗಿದೆ. ಆದರೆ ಸರಕಾರ ಸೇವೆ ಪರಿಗಣಿಸದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ ಅವರು, ಸರಕಾರ ನಮ್ಮಗಳ ಬೇಡಿಕೆ ಈಡೇರಿಸುವವರೆಗೂ ಜಿಲ್ಲಾ ಮಟ್ಟದಲ್ಲೂ ಎಲ್ಲ ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದರು.ಮುಷ್ಕರ ನಿರತರ ಸ್ಥಳಕ್ಕೆ ಆಗಮಿಸಿದ ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಕಂದಾಯ ಇಲಾಖೆ ಮೂಲಕ ಸರಕಾರದ ಕಾರ್ಯಕ್ರಮಗಳನ್ನು ಪರಿಪೂರ್ಣವಾಗಿ ಅನುಷ್ಟಾನಗೊಳಿಸುವ ಜವಾಬ್ದಾರಿ ಗ್ರಾಮ ಆಡಳಿತ ಅಧಿಕಾರಿಗಳ ಮೇಲಿದೆ. ಗ್ರಾಮಾಡಳಿತ ಅಧಿಕಾರಿಗಳ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗೆ ಬಗ್ಗೆ ನನ್ನ ಸಹಮತವಿದೆ. ಈ ಕುರಿತು ಕ್ಷೇತ್ರದ ಶಾಸಕರ ಬಳಿ ಚರ್ಚಿಸುವ ಮೂಲಕ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸರಕಾರದ ಮಟ್ಟದಲ್ಲಿ ಗಮನ ಸೆಳೆಯು ವಂತೆ ಶಾಸಕರಿಗೆ ಒತ್ತಾಯಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ, ತಾಲೂಕು ಉಪಾಧ್ಯಕ್ಷ ಬಿ.ಎಂ. ರಮೇಶ್, ಪ್ರಧಾನ ಕಾರ್ಯದರ್ಶಿ ಸಂತೋಷ್‍ಕುಮಾರ್, ಜಿಲ್ಲಾ ಪ್ರಧಾನ ಸಂಚಾಲಕ ಎಚ್.ಸಿದ್ದಪ್ಪ, ಲಿಂಗರಾಜು, ಶೃತಿ, ತೇಜಸ್, ಸುಮ, ಪ್ರತಿಭಾ, ರಂಜಿತಾ ಮತ್ತಿತರಿದ್ದರು.
11ಕೆಕೆಡಿಯು1.ಕಡೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ 2 ನೇ ಹಂತದ ಮುಷ್ಕರದ ನಡೆಸಿದರು. ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್, ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಕೆ.ರವೀಂದ್ರ ಮತ್ತಿತರರು ಇದ್ದರು.