ಕನ್ನಡಪ್ರಭ ವಾರ್ತೆ ತುಮಕೂರು ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅಲ್ಪಸಂಖ್ಯಾತರು ಹಾಗೂ ವಿವಿಧ ಸಮುದಾಯಗಳ ಮುಖಂಡರು ನಗರದ ಟೌನ್‌ಹಾಲ್ ವೃತ್ತ ಪ್ರತಿಭಟನೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಅತೀಕ್ ಅಹಮದ್ ನೇತೃತ್ವದಲ್ಲಿ ನೂರಾರು ಅಲ್ಪಸಂಖ್ಯಾತ, ದಲಿತ, ಹಿಂದುಳಿದ ವರ್ಗಗಳ ಮುಖಂಡರು ಪ್ರತಿಭಟನೆ ನಡೆಸಿ, ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಎಲ್ಲಾ ವರ್ಗದ ಜನರ ಪ್ರೀತಿಗಳಿಸಿರುವ, ಸದಾ ಜನರ ಒಳಿತಿಗಾಗಿ ದುಡಿಯುತ್ತಿರುವ ಜಮೀರ್ ಅಹಮದ್‌ಖಾನ್ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು.ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಅತೀಕ್ ಅಹಮದ್ ಮಾತನಾಡಿ, ಜಮೀರ್ ಅಹಮದ್ ಖಾನ್ ಅವರು ಕೇವಲ ಮುಸ್ಲಿಂರಿಗೆ ಅಲ್ಲ, ಎಲ್ಲಾ ಜನಾಂಗದ ಪ್ರೀತಿ ಗಳಿಸಿದ್ದಾರೆ. ಕಷ್ಟ ಎಂದು ಬಂದವರನ್ನು ಬರಿಗೈಯಲ್ಲಿ ಕಳುಹಿಸಿದ ಉದಾಹರಣೆಯೇ ಇಲ್ಲ. ಪಕ್ಷ ಮತ್ತು ಸರ್ಕಾರ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಅಚ್ಚು ಕಟ್ಟಾಗಿ ನಿಭಾಯಿಸಿ, ಒಳ್ಳೆಯ ಹೆಸರು ಬರುವಂತೆ ಮಾಡಿದ್ದಾರೆ. ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ಅಂದಿನ ದಾವಣೆಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಬಹಿರಂಗವಾಗಿಯೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದರು. ಅದನ್ನು ಸ್ವತಃ ಮಾಧ್ಯಮಗಳ ಮುಂದೆ ಒಪ್ಪಿಕೊಂಡರು. ಆದರೆ ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳದ ಹೈಕಮಾಂಡ್, ಉಪಚುನಾವಣೆ ಸಂದರ್ಭದ್ದು ಎನ್ನಲಾದ ಫೇಕ್ ಆಡಿಯೋ ಒಂದನ್ನು ಮುಂದಿಟ್ಟುಕೊಂಡು ಜಮೀರ್ ಅಹಮದ್ ಖಾನ್ ಅವರನ್ನು ಅಧಿಕಾರದಿಂದ ದೂರ ಇಡುವುದು ಕಾಂಗ್ರೆಸ್‌ನ ಇಬ್ಬಗೆಯ ನೀತಿಯನ್ನುತೋರಿಸುತ್ತದೆ ಎಂದು ನುಡಿದರು.
ದಾವಣಗೆರೆ ಉಪಚುನಾವಣೆಯ ಸಂದರ್ಭದಲ್ಲಿ ಜಮೀರ್ ಅಹಮದ್ ಖಾನ್ ಅವರು, ಕೇರಳದ ಸ್ಟಾರ್‌ಕ್ಯಾಂಪೈನರ್ ಆಗಿ ಕೆಲಸ ಮಾಡುತ್ತಿದ್ದರು. ಪಕ್ಷ ನೀಡಿದ ಕೆಲಸವನ್ನುಅಚ್ಚುಕಟ್ಟಾಗಿ ಮಾಡಿ, ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಸಚಿವ ಸಂಪುಟದಿಂದ ದೂರಇಡುವ ಮೂಲಕ ತಾರತಮ್ಯ ನೀತಿಯನ್ನು ಕಾಂಗ್ರೆಸ್ ಪಕ್ಷ ಅನುಸರಿಸಿದೆ. ಕೂಡಲೇ ಮುಖ್ಯಮಂತ್ರಿಗಳು,ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಪ್ರಿಯಾಂಕಾ ಗಾಂಧಿ ಅವರುಗಳು ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು. ದಲಿತ ಮುಖಂಡರಾದ ಶಿವಾಜಿ ಮಾತನಾಡಿ, ಮುಸ್ಲಿಂರನ್ನು ಅಧಿಕಾರದಿಂದ ದೂರ ಇಡುವುದು ಕಾಂಗ್ರೆಸ್ ಪಕ್ಷದ ಸಂಪ್ರದಾಯಕ ಮತದಾರರನ್ನು ದೂರ ಇಟ್ಟಂತೆ ಆಗುತ್ತದೆ. ಇದು ಶೋಷಿತರ ನಡುವೆ ದೊಡ್ಡ ಕಂದಕ ಉಂಟು ಮಾಡಲಿದೆ. ಹಾಗಾಗಿ ಪಕ್ಷ ಎಚ್ಚೆತ್ತು ಜಮೀರ್ ಅಹಮದ್‌ಖಾನ್ ಅವರನ್ನು ಮಂತ್ರಿ ಮಾಡಬೇಕೆಂದರು. ಪ್ರತಿಭಟನೆಯಲ್ಲಿ ಮುಖಂಡರಾದ ನದೀಂಪಾಷ(ಚಿಚ್ಚ), ಬಷೀರ್‌ಅಹಮದ್,ಮುಜೀಬ್‌ಅಹಮದ್, ಸೆಮಿವುಲ್ಲಾ, ಬಷೀರ್, ಪ್ರದೀಪಕುಮಾರ್, ಶಿವಾಜಿ, ಬಂಡೆಕುಮಾರ್, ಗುರುಪ್ರಸಾದ್, ನಯನ, ಗಂಗಮ್ಮ, ನಶಿಭಾ ಖಾನಂ, ಫಾತಿಮ, ದಸ್ತಗೀರ್, ಮೆಹಬೂಬ್‌ಖಾನ್, ಇರ್ಷಾದ್‌ಅಹಮದ್, ಚಾಂದ್ ಪಾಷ, ಷಾಹಬಾಜ್, ಆಲಿ, ಕಲಿಂ ಪಾಷ, ತೌಶಿಫ್ ಮತ್ತಿತರರು ಭಾಗವಹಿಸಿದ್ದರು.ಜಮೀರ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ
ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅಲ್ಪಸಂಖ್ಯಾತರು ಹಾಗೂ ವಿವಿಧ ಸಮುದಾಯಗಳ ಮುಖಂಡರು ನಗರದ ಟೌನ್‌ಹಾಲ್ ವೃತ್ತ ಪ್ರತಿಭಟನೆ ನಡೆಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.