ಸಾರಾಂಶ
ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು. ಸರ್ಕಾರ ಹೋರಾಟಗಾರರ ಮೇಲೆ ಅಧಿಕಾರದ ದರ್ಪ ತೋರಿಸುತ್ತಿದೆ. ಆದರೆ ದೇಶ ದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿ.
ಕನ್ನಡಪ್ರಭ ವಾರ್ತೆ ಮೈಸೂರು
ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ವಿಫಲಯತ್ನ ನಡೆಸಿದರು.ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆ ವೇಳೆ ಜಯಗಳಿಸಿದ ಕಾಂಗ್ರೆಸ್ ನ ನಾಸೀರ್ ಹುಸೇನ್ ಅವರ ಪರ ಬೆಂಬಲಿಗರು ಸಂಭ್ರಮಾಚರಣೆ ಮಾಡುವಾಗ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಇಂತವರಿಗೆ ಕಾಂಗ್ರೆಸ್ ಬೆಂಬಲ ನೀಡಿ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಸರ್ಕಾರ ನಿರ್ಧಾಕ್ಷ್ಯಿಣ್ಯ ಕ್ರಮ ಕೈಗೊಳ್ಳಬೇಕು. ಅಂತಹವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು. ಆದರೆ ಸರ್ಕಾರ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅವರು ದೂರಿದರು.ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆದು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಸರ್ಕಾರ ಹೋರಾಟಗಾರರ ಮೇಲೆ ಅಧಿಕಾರದ ದರ್ಪ ತೋರಿಸುತ್ತಿದೆ. ಆದರೆ ದೇಶ ದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿದರು.ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ, ಮುಖಂಡರಾದ ಜೋಗಿ ಮಂಜು, ವಿ. ಕವೀಶ್ಗೌಡ, ವಾಣೀಶ್ ಕುಮಾರ್, ಡಾ. ವಸಂತಕುಮಾರ್, ಹೇಮಾ ನಂದೀಶ್ ಮೊದಲಾದವರು ಇದ್ದರು