ಹೊಸಪೇಟೆ: ಹಿಂದಿ ಸಾಮ್ರಾಜ್ಯಶಾಹಿಗಳ ಪರ ನಿಲುವು, ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹೆಲೋತ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ಸುರಕ್ಷಿತ ಸ್ವರ್ಗವನ್ನಾಗಿಸುವ ದೂರಗಾಮಿ ಉದ್ದೇಶ ಹಿಂದಿ ಮಾಫಿಯಾಗಿದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂದು ದೂರಿದರು.ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು-ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ, ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿದೆ. ಆದರೆ, ರಾಜ್ಯಪಾಲರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ, ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಮುಖಂಡರಾದ ಎಚ್.ಎನ್. ಶ್ರೀನಿವಾಸ, ಎಸ್.ಎಂ. ಜಾಫರ್, ಈಡಿಗರ ರಮೇಶ್, ಜಿ. ನಾಗರಾಜ, ಕಾಟೇರ್ ಹಾಲೇಶ್, ಮೆಹಬೂಬ್ ಭಾಷಾ, ಶಮಾ, ರಸೀದ್, ಲಲಿತಮ್ಮ ಹೂಗಾರ್, ಪ್ರಶಾಂತ್ ನಾಯಕ, ಕಾರ್ತಿಕ್, ಇಬ್ರಾಹಿಂ ಸೇರಿದಂತೆ ಇತರರು ಒತ್ತಾಯಿಸಿದರು.ರಾಜ್ಯಪಾಲರ ವಜಾಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ
, ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹೆಲೋತ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.