ಸಾರಾಂಶ
ರಾಣಿಬೆನ್ನೂರು:ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸಬೇಕು ಹಾಗೂ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟಿಸಿ ಸಾರಿಗೆ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸಬೇಕು ಹಾಗೂ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟಿಸಿ ಸಾರಿಗೆ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್‌ಪಾಸ್ ವಿತರಣೆಯಾಗದ ಕಾರಣ ಪ್ರತಿದಿನ ನೂರಾರು ರು.ಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಿ ಬರುವುದು ಕಷ್ಟದ ಸಂಗತಿಯಾಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ಗಳನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ಬಳಸಿಕೊಳ್ಳಬೇಕು. ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ವಾರಗಳ ಕಾಲ ಅದನ್ನು ಪಡೆಯಲು ಕಾಯುವ ಸ್ಥಿತಿ ರಾಜ್ಯದಲ್ಲಿದೆ. ಇದರಿಂದ ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಹೋಗಲಾಗದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು ಅದಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಿಸಬೇಕು. ಇದಲ್ಲದೆ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವುದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಓಡಾಡಲು ಬಹಳ ಕಷ್ಟವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಬಾಗಿಲಲ್ಲಿ ನಿಂತು ಅಪಾಯದ ಪ್ರಯಾಣವನ್ನು ಮಾಡುವುದು ಕಂಡು ಬರುತ್ತಿದೆ. ಸರ್ಕಾರ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಿರ್ಧಾರ ಮಾಡಬೇಕು. ಬಸ್‌ಗಳ ಕೊರತೆಯಿರುವ ಹಳ್ಳಿಗಳಿಗೆ ಸಮರ್ಪಕವಾದ ಬಸ್‌ಗಳ ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))