ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ

| Published : Apr 21 2024, 02:18 AM IST

ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ನಗರದ ಅಶೋಕ ವೃತ್ತದಲ್ಲಿ ಶ್ರೀ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ ನಡೆಸಿತು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ನಗರದ ಅಶೋಕ ವೃತ್ತದಲ್ಲಿ ಶ್ರೀ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ ನಡೆಸಿತು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ, ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಅನ್ಯ ಕೋಮಿನ ದುಷ್ಕರ್ಮಿಯೊಬ್ಬ ಕಾಲೇಜಿನ ಕ್ಯಾಂಪಸ್‌ನಲ್ಲಿಯೇ ಆಕೆಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನೇಹಾಳನ್ನು ಹತ್ಯೆಗೈದ ದುಷ್ಕರ್ಮಿಗೆ ಗಲ್ಲುಶಿಕ್ಷೆ ವಿಧಿಸಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಪೋಷಿಸಬೇಕು. ಕುಟುಂಬಸ್ಥರಿಗೆ ರಕ್ಷಣೆ ನೀಡಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು

ಸಂಘ ಆಗ್ರಹಿಸಿದರುಪತ್ರಿಭಟನೆಯಲ್ಲಿ ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕ ಜಂಗಮದ ಸಮಾಜ ಮುಖಂಡರು ಇದ್ದರು.

ಲವ್ ಜಿಹಾದ್ ಮಟ್ಟ ಹಾಕಿ:

ನೇಹಾ ಕೊಲೆಯಾಗಿರುವುದಕ್ಕೆ ಲವ್ ಜಿಹಾದ್ ಕಾರಣ ಎನ್ನುವುದು ಜಗಜ್ಜಾಹೀರು ಆಗಿದೆ. ಆರೋಪಿಯನ್ನು ಕೂಡಲೇ ಗಲ್ಲಿಗೇರಿಸುವ ಮೂಲಕ ಲವ್ ಜಿಹಾದ್ ಮಟ್ಟ ಹಾಕಿ ಎಂದು ಜಿಲ್ಲಾ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಂಠಯ್ಯ ಹಿರೇಮಠ ಆಗ್ರಹಿಸಿದ್ದಾರೆ.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿಕೆ ಖಂಡಿಸಿದರು.

ಪದೇ ಪದೇ ಇಂಥ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಇಂಥ ಪ್ರಕರಣಗಳಲ್ಲಿಯೂ ರಾಜಕೀಯ ಮಾಡುವುದು ಸಲ್ಲದು, ಕೂಡಲೇ ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಡುವ ಮೂಲಕ ಮುಂದೆ ಇಂಥ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕಿಡಿಕಾರಿದರು.

ಮೊದಲು ಪ್ರೀತಿ ಮಾಡಿ, ನಂತರ ನಿರಾಕರಣೆ ಮಾಡಿರಬಹುದು. ಅದು ಆಕೆಯ ಇಷ್ಟ, ಆದರೆ, ಕೊಲೆ ಮಾಡುವುದು ಯಾವ ನ್ಯಾಯ, ಜೀವಕ್ಕ ಬೆಲೆ ಇಲ್ಲವೇ, ದೌರ್ಜನ್ಯ ಮಾಡಿ ಪ್ರೀತಿಸುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.

ಹಿರಿಯ ವಕೀಲ ವಿ.ಎಂ. ಭೂಸನೂರುಮಠ, ಸಿದ್ದಯ್ಯ ಹಿರೇಮಠ, ಪಿ.ಶರಣಪ್ಪ ಹಾಗೂ ಹಂಪಯ್ಯ ಬನ್ನಿಮಠ ಇದ್ದರು.