ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ

| Published : Jul 07 2025, 11:48 PM IST

ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕರವೇ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷರಾದ ದೀಪಕ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಕುಶಾಲನಗರದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭ ರಾಜ್ಯ ಸಂಚಾಲಕರಾದ ದೀಪಾ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್, ತಾಲೂಕು ಅಧ್ಯಕ್ಷರಾದ ಅಣ್ಣಯ್ಯ, ಮಹಿಳಾ ತಾಲೂಕು ಅಧ್ಯಕ್ಷೆ ರೂಪಾ ಗಣೇಶ್, ಯುವ ಘಟಕದ ಅಧ್ಯಕ್ಷರಾದ ವಸಂತ್ ಆಚಾರ್ಯ, ಕುಶಾಲನಗರ ತಾಲೂಕು ಗೌರವಾಧ್ಯಕ್ಷ ರೊನಾಲ್ಡ್, ಘಟಕಗಳ ಕಾರ್ಯದರ್ಶಿಗಳಾದ ಶೃತಿ ಗಿರೀಶ್, ರವೀಶ್, ಕುಮಾರ್, ಶೈಲಾ ಕಾರ್ಯಕರ್ತರು ಇದ್ದರು.