ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಆಗ್ರಹಿಸಿ ಪ್ರತಿಭಟನೆ

| Published : Jul 06 2025, 01:48 AM IST

ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಣದ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಗದಗ: ಶಿಕ್ಷಣದ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕರವೇ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಮಾತನಾಡಿ, ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯನ್ನು ಹಿಂದಿಯನ್ನಾಗಿ ಕಲಿಸಲಾಗುತ್ತಿದೆ. ರಾಜ್ಯದ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ. ಮಾತ್ರವಲ್ಲದೇ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಾಗಿದೆ. ಹಿಂದಿ ತೃತೀಯ ಭಾಷೆಯಾದ ಹಿಂದಿಯಲ್ಲಿ ಕಳೆದ 2024ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸುಮಾರು 90,794 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದು ಅತ್ಯಂತ ಅಘಾತಕಾರಿಕ ಬೆಳವಣಿಗೆಯಾಗಿದೆ. ಶೈಕ್ಷಣಿಕ ಹೊರೆಯನ್ನು ಸ್ವಷ್ಟವಾಗಿ ತೋರಿಸುತ್ತದೆ. ಹಿಂದಿ ಹೇರಿಕೆ ಕನ್ನಡದ ಮಕ್ಕಳ ಭವಿಷ್ಯಕ್ಕೆ ಬಲಿಯಾಗುತ್ತಿದೆ. ಅದಕ್ಕಾಗಿ ನಮ್ಮ ರಾಜ್ಯದಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಹಾಗೂ ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗೆ ಇಡಬೇಕು. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಗಳ ಶಾಲೆಯಲ್ಲಿ ಏಕರೂಪದ ದ್ವಿಭಾಷಾ ನೀತಿಯನ್ನು ಜಾರಿಗೆಗೊಳಿಸಬೇಕು ಮತ್ತು ಸಿ.ಬಿ.ಎಸ್.ಇ., ಐ.ಸಿ.ಎಸ್.ಇ. ಶಾಲೆಗಳಲ್ಲಿ ಪ್ರಥಮ ಭಾಷೆ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ಜೊತೆಗೆ ಕನ್ನಡ ಮಾಧ್ಯಮದ ಶಾಲೆಗಳನ್ನು ಬಲಪಡಿಸಿ ಉತ್ತಮ ಗುಣಮಟ್ಟದ ಇಂಗ್ಲೀಷ್‌ ಶಿಕ್ಷಣ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬಸವರಾಜ ಹೊಗೆಸೊಪ್ಪಿನ, ಶರಣಪ್ಪ ಕರಮುಡಿ, ತೌಸೀಫ ಢಾಲಾಯತ್, ಜಲಾನಿ ಗುಳಗುಂದಿ, ಬಸವರಾಜ ನರೇಗಲ್, ನಿಂಗನಗೌಡ ಮಾಲಿಪಾಟೀಲ, ವಿನಾಯಕ ಬದಿ, ಕುಮಾರ ರೇವಣ್ಣವರ, ಮೈಬೂಸಾಬ ಶಿರಹಟ್ಟಿ, ಗೌಸುಸಾಬ ಶಿರಹಟ್ಟಿ, ರೆಹಮಾನಸಾಬ ದರ್ಗಾದ, ಅಜರತಅಲಿ, ಸಾಧಿಕ ಡಕ್ಕೇದ, ಪ್ರಕಾಶ ಸಂದಿಗವಾಡ, ಮಹಾದೇವಿ ದೊಡ್ಡಗೌಡರ, ಆಶಾ ಜೋಲಗುಡ್ಡ, ಅಶೋಕ ಜಿಗಳೂರ, ಹನಮಂತಪ್ಪ ಪೂಜಾರ, ಹುಸೇನ ಅಕ್ಕಿ, ಯಶೋಧ ಬಾಳೋಜಿ, ಮಂಜುನಾಥ ದೊಡ್ಡಮನಿ ಹಾಗೂ ಕರವೇ ಕಾರ್ಯಕರ್ತರು ಇದ್ದರು.