ಸಾರಾಂಶ
ಹೊಸಕೋಟೆ: ಹಾಲಿನ ದರ ಹೆಚ್ಚಳ ಸೇರಿದಂತೆ ಹಾಲಿನ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಫೆ.10ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕರ್ನಾಟಕ ಹಾಲು ಮಹಾ ಮಂಡಳ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಹಕ್ಕಲೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ಸರ್ಕಾರ ನೀಡುತ್ತಿರುವ ಹಣ ತುಂಬಾ ಕಡಿಮೆ. ಆದ್ದರಿಂದ ಒಂದು ಲೀಟರ್ ಹಾಲಿಗೆ 50 ರು.ನೀಡಬೇಕು ಎಂದು ಒತ್ತಾಯಿಸಿ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಬಚ್ಚೇಗೌಡ, ಉಪಾಧ್ಯಕ್ಷ ರಾಜಣ್ಣ, ಪ್ರ.ಕಾರ್ಯದರ್ಶಿ ಸುರೇಶ್, ಕಾರ್ಯದರ್ಶಿ ಶ್ರೀನಿವಾಸ್, ಸಹ ಕಾರ್ಯದರ್ಶಿ ರಾಜಣ್ಣ, ನಾರಾಯಣಪ್ಪ, ಸಂಘಟನಾ ಕಾರ್ಯದರ್ಶಿ ಹೈದರ್ ಬೇಗ್, ವೆಂಕಟೇಶಪ್ಪ, ಸಂಚಾಲಕ ಬಿಪಿ ಮುನಿರಾಜು, ಹಾಲು ಉತ್ಪಾದಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೆಂಪೇಗೌಡ, ಮಹಿಳಾಧ್ಯಕ್ಷೆ ಸುಮ ಹಾಜರಿದ್ದರು.
ಫೋಟೋ: 8 ಹೆಚ್‌ಎಸ್‌ಕೆ 1ಬೆಂಗಳೂರಿನ ಕೆಎಂಎಫ್ ಕೇಂದ್ರ ಕಚೇರಿ ಮುಂದೆ ಹಮ್ಮಿಕೊಂಡಿರುವ ಪ್ರತಿಭಟನೆ ಕುರಿತು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಹಕ್ಕಲೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.