ಸರ್ವ ಸಮಾಜಗಳ ಹಿತ ಚಿಂತಕರಾಗಿ ಸಂತೋಷ ಲಾಡ್ ಅವರು ಕೆಲಸ ಮಾಡುತ್ತಾ ಬಂದಿದ್ದಾರೆ. ವಿಶೇಷವಾಗಿ ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕರಾಗಿದ್ದಾರೆ. ಈ ಹಿಂದೆ ಕಾರ್ಮಿಕ ಸಚಿವರಾಗಿ ಕಾರ್ಮಿಕರ ಕಲ್ಯಾಣಕ್ಕೆ ಮತ್ತು ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ.
ಹುಬ್ಬಳ್ಳಿ:ಶಾಸಕ ಸಂತೋಷ ಲಾಡ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಅವರ ಅಭಿಮಾನಿ ಬಳಗದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಅಂಬೇಡ್ಕರ್ ಸರ್ಕಲ್ ಬಳಿ ಸಂತೋಷ ಲಾಡ್ ಅವರ ಭಾವಚಿತ್ರ ಇರುವ ಫೋಸ್ಟರ್ ಪ್ರದರ್ಶನ ಮಾಡಿದರು. ಸರ್ವ ಸಮಾಜಗಳ ಹಿತ ಚಿಂತಕರಾಗಿ ಸಂತೋಷ ಲಾಡ್ ಅವರು ಕೆಲಸ ಮಾಡುತ್ತಾ ಬಂದಿದ್ದಾರೆ. ವಿಶೇಷವಾಗಿ ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕರಾಗಿದ್ದಾರೆ. ಈ ಹಿಂದೆ ಕಾರ್ಮಿಕ ಸಚಿವರಾಗಿ ಕಾರ್ಮಿಕರ ಕಲ್ಯಾಣಕ್ಕೆ ಮತ್ತು ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ ಅವರ ಮಂತ್ರಿಮಂಡಲದಲ್ಲಿ ಲಾಡ್ ಅವರಿಗೆ ಸಚಿವ ಸ್ಥಾನ ನೀಡುವ ಜತೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು. ಈ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ ಜುಟ್ಟಲ, ಶಿವಾನಂದ ಮುತ್ತಣ್ಣವರ, ಪ್ರೇಮನಾಥ ಚಿಕ್ಕತುಂಬಳ, ಅರ್ಜುನ ಪಾಟೀಲ, ಸಯ್ಯದ್ ಶೇಖ, ನೆಹರು ಪಾಟೀಲ, ವೆಂಕಣ್ಣ ಸಂಶಿ, ಶಂಭಯ್ಯ ನಿರಲಗಿ, ಪರ್ವೇಜ್ ಬ್ಯಾಹಟ್ಟಿ, ಯಲ್ಲಪ್ಪಗೌಡ ಪಾಟೀಲ, ಹಮೀದ ಕೊಪ್ಪದ ಸೇರಿದಂತೆ ಇತರರು ಇದ್ದರು.