ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

| Published : Jun 02 2024, 01:47 AM IST / Updated: Jun 02 2024, 07:51 AM IST

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಹಿತದೃಷ್ಟಿಯಿಂದ ಭ್ರಷ್ಟಾಚಾರದಲ್ಲಿ ಭಾಗಿಯಾದ ನಾಗೇಂದ್ರ ರಾಜೀನಾಮೆ ಪಡೆದು ಸಿಬಿಐ ತನಿಖೆಗೆ ಸೂಚಿಸಬೇಕು. ಈ ಹಗರಣ ಬಯಲಿಗೆಳೆದು ಪ್ರಾಣ ಬಿಟ್ಟಿರುವ ಚಂದ್ರಶೇಖರ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು

ಗದಗ: ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಬಹುಕೋಟಿ ಭ್ರಷ್ಟಾಚಾರ ನಡೆದಿದ್ದು. ಈ ವರೆಗೂ ಸಿಎಂ, ಡಿಸಿಎಂ, ಗೃಹ ಸಚಿವರು, ಕಾನೂನು ಸಚಿವರು ಭ್ರಷ್ಟಾಚಾರದಲ್ಲಿ ಭಾಗಿಯಾದ ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವುದನ್ನು ಬಿಟ್ಟು ತನಿಖೆ ಆಧಾರಿಸಿ ರಾಜೀನಾಮೆ ಪಡೆಯುತ್ತೇವೆ ಎಂದು ಕಾಲಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ ಅಕ್ಕಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಹಳೆ ಡಿಸಿ ಕಚೇರಿ ಸರ್ಕಲ್‌ನಲ್ಲಿ ಶನಿವಾರ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್.ಟಿ. ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ನಡೆಸಿ ಮಾತನಾಡಿದರು.

ರಾಜ್ಯದ ಹಿತದೃಷ್ಟಿಯಿಂದ ಭ್ರಷ್ಟಾಚಾರದಲ್ಲಿ ಭಾಗಿಯಾದ ನಾಗೇಂದ್ರ ರಾಜೀನಾಮೆ ಪಡೆದು ಸಿಬಿಐ ತನಿಖೆಗೆ ಸೂಚಿಸಬೇಕು. ಈ ಹಗರಣ ಬಯಲಿಗೆಳೆದು ಪ್ರಾಣ ಬಿಟ್ಟಿರುವ ಚಂದ್ರಶೇಖರ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದು, ರಾಜೀನಾಮೆ ಪಡೆಯದಿದ್ದರೆ ಪ್ರತಿ ತಾಲೂಕಿನಲ್ಲಿಯೂ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ವಿಪ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಭ್ರಷ್ಟರಿಗೆ ಮಣೆ ಹಾಕುತ್ತಿದೆ, ಭ್ರಷ್ಟರನ್ನು ರಕ್ಷಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ ಮಾತಿಗೂ ನುಡಿದಂತೆ ನಡೆಯುವ ಸರ್ಕಾರ ಎಂದು ಘೋಷಣೆ ಹಾಕುತ್ತಾರೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಕೊಲೆ, ಸುಲಿಗೆ, ಭ್ರಷ್ಟಾಚಾರ ಹತೋಟಿಗೆ ತರಲು ಸಾಧ್ಯವಾಗಿಲ್ಲ ಎಂದರು.

ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಪ್ಪ ರಂಗಪ್ಪನವರ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಮುಖ್ಯ ಪಾತ್ರ ವಹಿಸಿರುವ ಸಚಿವರು ಹಾಗು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಶಿಕ್ಷೆ ಆಗಬೇಕು ಮತ್ತು ದುರುಪಯೋಗವಾದ ಹಣ ಪುನಃ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಜಮಾ ಮಾಡಬೇಕು. ಮಾಡದಿದ್ದರೆ ರಾಜ್ಯವ್ಯಾಪಿ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದರು.

ಇದೇ ವೇಳೆ ರಸ್ತೆ ತಡೆಯಿಂದ ಕೆಲಕಾಲ ವಾಹನ ಸವಾರರು ಪರದಾಡಿದ ಘಟನೆ ನಡೆಯಿತು.

ಈ ಸಂದರ್ಭದಲ್ಲಿ ಎಂ.ಎಸ್. ಕರೀಗೌಡ್ರ, ಅನಿಲ ಅಬ್ಬಿಗೇರಿ, ಲಿಂಗರಾಜ ಪಾಟೀಲ, ಜಗನ್ನಾಥಸಾ ಭಾಂಡಗೆ, ಅಶೋಕ ಸಂಕಣ್ಣವರ, ಅಶೋಕ ನವಲಗುಂದ, ಅಶೋಕ ಕುಡತಿನಿ, ಸುಧೀರ ಕಾಟಿಗರ, ಗಂಗಾಧರ ಹಬೀಬ, ಶಕ್ತಿ ಕತ್ತಿ, ರಾಗು ಪರಾಪುರ, ಶಶಿಧರ ದಿಂಡೂರ, ನಾಗರಾಜ ಕುಲಕರ್ಣಿ, ಸುರೇಶ ಚಿತ್ತರಗಿ, ಸುರೇಶ ಮರಳಪ್ಪನವರ, ವೈ.ಪಿ. ಅಡ್ನೂರ, ಯಲ್ಲಪ್ಪ ಶಿರಿ, ಪ್ರಶಾಂತ ನಾಯ್ಕರ, ನಾಗರಾಜ ತಳವಾರ, ವಿಜಯಲಕ್ಷ್ಮೀ ಮಾನ್ವಿ, ಕಮಲಾಕ್ಷಿ ಅಂಗಡಿ, ಯೋಗೇಶ್ವರಿ ಭಾವಿಕಟ್ಟಿ, ಮಾಸರಡ್ಡಿ, ಅಪ್ಪಣ್ಣ ಟೆಂಗಿನಕಾಯಿ, ಮಂಜುನಾಥ ತಳವಾರ, ಲಕ್ಷ್ಮಣ ವಾಲ್ಮೀಕಿ, ವಿಶ್ವನಾಥ ಶಿರಿಗಣ್ಣವರ, ಅರವಿಂದ ಅಣ್ಣಿಗೇರಿ, ಅಶೋಕ ಕರೂರ, ಮುತ್ತಣ್ಣ ಮೂಲಿಮನಿ, ರಮೇಶ ಸಜ್ಜಗಾರ, ಪ್ರಕಾಶ ಕೊತಂಬರಿ, ನವೀನ ಕೊಟೆಕಲ್, ವೆಂಕಟೇಶ ಹಬೀಬ, ರಾಹುಲ ಸಂಕಣ್ಣವರ, ಮಂಜುನಾಥ ಶಾಂತಗೇರಿ, ವಿನೋದ ಹಂಸನೂರ ಇದ್ದರು.