ಸಾರಾಂಶ
ಕನ್ನಡಪ್ರಭ ವಾರ್ತೆ ಕೊಲ್ಹಾರ: ತಾಲೂಕಿನ ಮುಳವಾಡ ಬಳಿ ನಿರ್ಮಿಸಲಾಗಿರುವ ಟೋಲ್ ಪ್ಲಾಜಾ ವ್ಯಾಪ್ತಿಯ ಸುತ್ತಮುತ್ತಲಿನ ಸುಮಾರು ಇಪ್ಪತ್ತು ಹಳ್ಳಿಗಳ ಗ್ರಾಮಸ್ಥರು ಹಾಗೂ ರೈತರ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಬಾರದು ಎಂದು ಆಗ್ರಹಿಸಿ ಟೋಲ್ ಪ್ಲಾಜಾ ಎದುರಿಗೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ಹಿಂದೆ ಟೋಲ್ ಪ್ಲಾಜಾ ವ್ಯಾಪ್ತಿಯ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸಬಾರದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಆದರೆ, ಇವರು ನಮಗೆ ಕಾನೂನು ಬಾಹಿರವಾಗಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಯಾರಿಗೆಲ್ಲಾ ಶುಲ್ಕ ವಿಧಿಸಲಾಗುತ್ತಿದೆ ಎಂಬ ದಾಖಲಾತಿಗಾಗಿ ಪ್ರತಿಭಟನಾಕಾರರರು ಒತ್ತಾಯ ಮಾಡಿದರು. ಟೋಲ್ ವ್ಯಾಪ್ತಿಯ ಗ್ರಾಮಗಳ ಜನರಿಗೆ ಶುಲ್ಕ ವಿಧಿಸಬಾರದು ಎಂದು ಆಗ್ರಹಿಸಿದರು. ಪ್ರತಿಭಟನೆ ಹಿನ್ನಲೆಯಲ್ಲಿ ಎನ್‌ಎಚ್ 214ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಹಾಗೂ ಪ್ರಯಾಣಿಕರ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಆಗಮಿಸಿ, ಪ್ರತಿಭಟನಾಕಾರ ಮನವೊಲಿಕೆಗೆ ಮುಂದಾದರು. ನಂತರ ಯಾವುದೇ ವಾಹನಗಳಿಗೆ ಶುಲ್ಕ ವಿಧಿಸದೇ ಪ್ರಯಾಣಕ್ಕೆ ಟೋಲ್ ಸಿಬ್ಬಂದಿ ಅನುವು ಮಾಡಿಕೊಟ್ಟಿದ್ದರಿಂದ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಕೈ ಬಿಟ್ಟರು.