ಸಾರಾಂಶ
ಪಟ್ಟಣದ ಆಸ್ಪತ್ರೆಯಲ್ಲಿ ಪ್ರತಿ ನಿತ್ಯ ಅಂದಾಜು 800ಕ್ಕೂ ಹೆಚ್ಚು ರೋಗಿಗಳು ಬರುತ್ತಿದ್ದಾರೆ. ಡಾಟಾ ಎಂಟ್ರಿ ಆಪರೇಟರ್‌ಗಳು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರರಿಗೆ ವೇತನ ನೀಡುವಂತೆ ಆಗ್ರಹಿಸಿ ರೈತಸಂಘದ ಕಾರ್ಯಕರ್ತರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು.ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ನೇತೃತ್ವದಲ್ಲಿ ಆಸ್ಪತ್ರೆಯ ಮುಂದೆ ಪ್ರತಿಭಟನೆ ಆರಂಭಿಸಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯ ಡಾ.ಮಂಜುನಾಥ್, ಸಂಬಳ ನೀಡಿದ ಏಜೆನ್ಸಿ ವಿರುದ್ಧ ಧಿಕ್ಕಾರದ ಘೋಷಣೆಗಳು ಕೇಳಿ ಬಂತು.ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ಆಸ್ಪತ್ರೆಯ ಡಿ ಗ್ರೂಪ್ ನೌಕರರಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳ ಬಂದಿಲ್ಲ. ಕೂಡಲೇ ಸಂಬಳ ನೀಡಬೇಕು. ಆಯಾಯ ತಿಂಗಳೇ ಸಂಬಳ ನೀಡಬೇಕು ಎಂದು ಆಗ್ರಹಿಸಿದರು.
ಪಟ್ಟಣದ ಆಸ್ಪತ್ರೆಯಲ್ಲಿ ಪ್ರತಿ ನಿತ್ಯ ಅಂದಾಜು 800ಕ್ಕೂ ಹೆಚ್ಚು ರೋಗಿಗಳು ಬರುತ್ತಿದ್ದಾರೆ. ಡಾಟಾ ಎಂಟ್ರಿ ಆಪರೇಟರ್‌ಗಳು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಕೂಡಲೇ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.ಆಸ್ಪತ್ರೆಯಲ್ಲಿ ಹೊರ ರೋಗಿಗಳ ಎಂಟ್ರಿಗೆ ಓರ್ವ ಆಪರೇಟರ್‌ನಿಂದ ಕೆಲಸ ಆಗುತ್ತಿಲ್ಲ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೂ ಪ್ರತ್ಯೇಕ ಕೌಂಟರ್ ತೆರೆಯಬೇಕು ಎಂದು ಆಡಳಿತ ವೈದ್ಯರನ್ನು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ತಾಲೂಕು ರೈತಸಂಘದ ಅಧ್ಯಕ್ಷ ಹಂಗಳ ದಿಲೀಪ್, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮುಖಂಡರಾದ ಸದಾನಂದ, ಮಹದೇವಸ್ವಾಮಿ, ನಾಗರಾಜು, ರಂಗಸ್ವಾಮಿ, ರೂಪೇಶ್, ರೇವಣ್ಣ ಸೇರಿದಂತೆ ಹಲವರಿದ್ದರು.
೧೬ಜಿಪಿಟಿ೩ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಿಗೆ ವೇತನ ನೀಡಬೇಕು ಎಂದು ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.