ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಹೊಸಪೇಟೆ: ಹಂಪಿ ಪ್ರಾಧಿಕಾರದ ಹೊರಗುತ್ತಿಗೆ ಸ್ವಚ್ಛತಾ ಕಾರ್ಮಿಕರನ್ನು ಕೆಲಸದಿಂದ ಕೈಬಿಟ್ಟಿರುವ ಹವಾಮಾ ( ) ಕ್ರಮವನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಸಿಐಟಿಯು ಮುಖಂಡ ಕೆ.ಎಂ. ಸಂತೋಷ ಮಾತನಾಡಿ, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಅಡಿ ಕಳೆದ 25 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಚ್ಛತಾ ಕಾರ್ಮಿಕರನ್ನು ಹಂಪಿ ಜಾತ್ರೆ ಮುಗಿದ ನಂತರ ಹಣಕಾಸಿನ ಮುಗ್ಗಟ್ಟಿನ ನೆಪವೊಡ್ಡಿ ಕೆಲಸದಿಂದ ಕೈಬಿಡುವ ಮೂಲಕ ಕಾರ್ಮಿಕರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದೇ ಕೆಲಸವನ್ನು ನಂಬಿರುವ ಕಾರ್ಮಿಕರನ್ನು ತಕ್ಷಣವೇ ಹೊರಗುತ್ತಿಗೆ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು. ಇಲ್ಲವೇ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಕಚೇರಿ ಮುಂಭಾಗದಲ್ಲೇ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಹೋರಾಟದಲ್ಲಿ ಸಿಐಟಿಯು ಜಿಲ್ಲಾ ಸಹ ಸಂಚಾಲಕರಾದ ಕೆ.ಎಂ. ಸ್ವಪ್ನ ಸೇರಿದಂತೆ ಸಂಘಟನೆಯ ಪ್ರಮುಖರು, ಪದಾಧಿಕಾರಿಗಳು, ನೂರಾರು ಸಂಖ್ಯೆಯಲ್ಲಿ ಹೊರಗುತ್ತಿಗೆ ಸ್ವಚ್ಛತಾ ಕಾರ್ಮಿಕರು ಭಾಗವಹಿಸಿದ್ದರು.ಹೊಸಪೇಟೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಹಂಪಿ ಪ್ರಾಧಿಕಾರದ ಹೊರಗುತ್ತಿಗೆ ಸ್ವಚ್ಛತಾ ಕಾರ್ಮಿಕರನ್ನು ಕೆಲಸದಿಂದ ಕೈಬಿಟ್ಟಿರುವ ಹವಾಮಾ ಕ್ರಮವನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.