ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

| Published : Dec 23 2023, 01:45 AM IST

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

೨೦೨೨-೨೦೨೩ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆ ಅಡಿಯ ವಿದ್ಯಾರ್ಥಿ ವೇತನ ಬಿಡುಗಡೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿ, ಗದಗ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ತಹಸೀಲ್ದಾರ್‌ಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಮನವಿಗದಗ: ೨೦೨೨-೨೦೨೩ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆ ಅಡಿಯ ವಿದ್ಯಾರ್ಥಿ ವೇತನ ಬಿಡುಗಡೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿ, ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಸಂಘಟನಾ ಕಾರ್ಯದರ್ಶಿ ಅರುಣ ಬಾರಕೇರ ಮಾತನಾಡಿ, ರಾಜ್ಯದಲ್ಲಿ ಬಡ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಅಪಾಯಕಾರಿ, ಅಸುರಕ್ಷಿತ ಹಾಗೂ ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಮತ್ತು ಅವರ ಕುಟುಂಬದ ರಕ್ಷಣೆಗಾಗಿ ಸರಕಾರಗಳು ಬದ್ಧವಾಗಿರಬೇಕು. ಆದರೆ ರಾಜ್ಯ ಸರ್ಕಾರ ೨೦೨೨-೨೩ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆ ಅಡಿಯ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳಿಗೆ ಈವರೆಗೂ ಜಮೆ ಆಗದೆ ಬಡ ವಿದ್ಯಾರ್ಥಿಗಳ ಜೀವನದ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯದರ್ಶಿ ನಿಖಿತಾ ಸುತಾರ ಮಾತನಾಡಿ, ಎಲ್ಲಾ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಂಡಿದ್ದ ಹಿಂದಿನ ಸರ್ಕಾರ ಎಲ್ಲರಿಗೂ ಸಹಾಯ ಹಸ್ತವನ್ನು ಚಾಚಿತ್ತು, ಜತೆಗೆ ಎಲ್ಲ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಹಿಂದೆ ಇದ್ದ ವಿದ್ಯಾರ್ಥಿ ವೇತನಕ್ಕಿಂತ ಶೇ.೫೦ರಷ್ಟು ಸಹಾಯಧನ ಹೆಚ್ಚಳ ಮಾಡಿತ್ತು. ಆದರೆ, ಇಂದಿನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ಇಲಾಖೆಯಲ್ಲಿ ಹಣವಿಲ್ಲವೆಂದು ನೆಪವೊಡ್ಡಿ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನದ ಶೇ. ೬೦ ಮೊತ್ತವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ರಾಜ್ಯ ಸರ್ಕಾರ ಕೂಡಲೇ ೨೦೨೨-೨೩ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಜಮೆ ಮಾಡಬೇಕು. ಯಾವುದೇ ರೀತಿ ಕಡಿತ ಮಾಡದೆ ಪೂರ್ಣ ವಿದ್ಯಾರ್ಥಿ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಅಭಿಷೇಕ ಮಲ್ಲನಗೌಡ್ರ, ಹರ್ಷ ಕಟ್ಟಿ, ಕೊಟ್ರೇಶ, ಉದಯ ಸೇರಿದಂತೆ ಎಬಿವಿಪಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಇದ್ದರು.