ಡಿಸೆಂಬರ್ 30 ರವರೆಗೆ ತುಂಗಭದ್ರಾ ಜಲಾಶಯದ ಎಲ್ಲಾ ಕಾಲುವೆಗಳಲ್ಲಿ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ಇಲ್ಲಿನ ನೀರಾವರಿ ಕಚೇರಿಯ ಒಳ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಮುಖಂಡತ್ವವನ್ನು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ರಾಷ್ಟ್ರೀಯ ಅಧ್ಯಕ್ಷ ಎಂ.ಎನ್. ಕುಕನೂರ್ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮುನಿರಾಬಾದ್

ಈ ಸಂದರ್ಭ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಎಂ.ಎನ್. ಕುಕನೂರ್ ಡಿ. 30ರವರೆಗೆ ತುಂಗಭದ್ರಾ ಜಲಾಶಯದ ವಿವಿಧ ಕಾಲುವೆಗಳಲ್ಲಿ ನೀರು ಹರಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ರೈತರು ಬೆಳೆದ ಫಸಲು ಕೈಗೆ ಬರುವ ಸಮಯದಲ್ಲಿ ರೈತರ ಹೊಲಗಳಿಗೆ ನೀರು ನಿಲ್ಲಿಸಿದರೆ ರೈತರಿಗೆ ಸಂಕಷ್ಟವಾಗುತ್ತದೆ. ಸರ್ಕಾರವು ಆಂಧ್ರದ ಪಾಲಿನ ನೀರನ್ನು ಬಳಸಿ ನಮ್ಮ ರೈತರ ಬೆಳೆಯನ್ನು ಉಳಿಸಬೇಕೆಂದು ಕುಕನೂರ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಎಸ್ ಎ ಖಾದ್ರಿ, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ರತ್ನಮ್ಮ ಕಮಲಾಪುರ್, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಅಧ್ಯಕ್ಷರುಗಳಾದ ಕೋಟಲ್ ವೀರೇಶ್ ಹಾಗೂ ಗಂಗಾಧರ್, ವಿಜಯನಗರ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷೆ ಪುಷ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುನಿರಾಬಾದ್: ಡಿ.15 ವರೆಗೆ ನೀರು ಹರಿಸದಿದ್ದರೆ ಹೆದ್ದಾರಿ ತಡೆ- ಬಿ.ವಿ. ಗೌಡತುಂಗಭದ್ರಾ ಜಲಾಶಯದ ಕಾಲುವೆಗಳಿಗೆ ಡಿಸೆಂಬರ್ 15 ರವರೆಗೆ ನೀರು ಹರಿಸುವಂತೆ ರೈತರು ಮನವಿ ಮಾಡಿದ್ದು. ಒಂದು ವೇಳೆ ಸಕಾರಾತ್ಮಕ ಪ್ರತಿಕ್ರಿಯೆ ಬಾರದಿದ್ದರೆ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಬಿ.ವಿ. ಗೌಡ ತಿಳಿಸಿದರು.

ನಮ್ಮ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಡಿ.15ರ ವರೆಗೆ ಕಾಲುವೆಗೆ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ನಮಗೆ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದರೆ ಸರಿ. ಇಲ್ಲದಿದ್ದರೆ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.