ಕನ್ನಡಪ್ರಭ ವಾರ್ತೆ ಮಡಿಕೇರಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಪ್ರಶ್ನಿಸಿದ ಯುವಜನರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಕೊಡಗು ಜಿಲ್ಲಾ ಎಸ್‌ಡಿಪಿಐ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿಯ ಅಂಗ ಸಂಸ್ಥೆ ಆರೆಸ್ಸೆಸ್ ಮತ್ತು ಕೇಂದ್ರದ ಆಡಳಿತಾರೂಢ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಜಾತಿ ಭೇದ ಮರೆತು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ಇಡೀ ದೇಶದ ಯುವಜನತೆ ಪಾಲ್ಗೊಂಡಿದ್ದು, ಬಿಜೆಪಿಗೆ ಹತಾಶೆ ತಂದಿದೆ ಎಂದರು.ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಮನ್ಸೂರ್, ಅಬ್ದುಲ್ಲಾ ಅಡ್ಕಾರ್, ಮೇರಿ ವೇಗಸ್, ರಜಾಕ್ ಮತ್ತಿತರರು ಪಾಲ್ಗೊಂಡಿದ್ದರು.