ಸಾರಾಂಶ
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಉತ್ತರ ಕರ್ನಾಟಕ ದಿ. ಎ.ಜೆ. ಮುಧೋಳ ಅಭಿಮಾನಿಗಳ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಧಾರವಾಡ ಜಿಲ್ಲಾ ಎಐಟಿಯುಸಿ ಸಹಯೋಗದಲ್ಲಿ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
- ದಿ. ಎ.ಜೆ. ಮುಧೋಳ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಉತ್ತರ ಕರ್ನಾಟಕ ದಿ. ಎ.ಜೆ. ಮುಧೋಳ ಅಭಿಮಾನಿಗಳ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಧಾರವಾಡ ಜಿಲ್ಲಾ ಎಐಟಿಯುಸಿ ಸಹಯೋಗದಲ್ಲಿ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ನಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಗಾಗಲೇ ಸಹಾಯಕ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈ ವರೆಗೂ ಈಡೇರಿಲ್ಲ. ಕಾರ್ಮಿಕರ ಕಚೇರಿಯಿಂದ ಪ್ರತಿಯೊಂದು ಮಾಹಿತಿ ಲಭ್ಯವಾಗಬೇಕು. ಕಾರ್ಮಿಕರ ಮಕ್ಕಳಿಗೆ ಶಿಷ್ಯ ವೇತನ ನೀಡಲಾಗುತ್ತಿದ್ದು, ಕಳೆದ ಮೂರು ವರ್ಷಗಳಿಂದ ನೀಡುತ್ತಿಲ್ಲ. ಆದಷ್ಟು ಶೀಘ್ರವೇ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಕಾರ್ಮಿಕರಿಗೆ ಲೇಬರ್ ಕಾರ್ಡ್, ಕಾರ್ಮಿಕರ ಕಿಟ್ ಕೊಡಬೇಕು. ಕಟ್ಟಡ ಕಾರ್ಮಿಕರ ಪಿಂಚಣಿ ಯೋಜನೆ ಮರುಜಾರಿಗೊಳಿಸಬೇಕು. ಕಟ್ಟಡ ಕಾರ್ಮಿಕರಿಗೆ ಆಶ್ರಯ ಮನೆ ನೀಡಬೇಕು. ಮದುವೆ ಮತ್ತು ಮರಣದ ಪರಿಹಾರ ಶೀಘ್ರವೇ ವಿತರಿಸುವುದು ಸೇರಿದಂತೆ ಒಟ್ಟು 10 ಬೇಡಿಕೆಗಳ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಬಾಬಾಜಾನ್ ಮುಧೋಳ, ಆಸೀಫ್, ಹಸನಬಾಸ್ ಜುಂಗೂರ, ಬಿ.ಎ. ಮುಧೋಳ, ಖಾಜಾ ಬಿಸ್ತಿ, ಗೌಸ್ ಗಾಳಿ, ಬಾಷಾ ಟಾಕಿವಾಲೆ, ಪೀರಸಾಬ ನದಾಫ, ಎನ್.ಎ. ಇನಾಂದಾರ, ಶಹೀದ್ ಕಮಡೊಳ್ಳಿ, ರಮೇಶ ಬೋಸ್ಲೆ, ಕಾಶೀಮಸಾಬ ಹನುಮಸಾಗರ, ಯುಸೂಫ್ ಬಳ್ಳಾರಿ ಸೇರಿದಂತೆ ಹಲವರಿದ್ದರು.