ವೇಗದೂತ ಬಸ್‌ ನಿಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನೆ

| Published : Jun 25 2024, 12:35 AM IST

ಸಾರಾಂಶ

ಮಾನ್ವಿ ತಾಲೂಕಿನ ರಾಯಚೂರು ರಸ್ತೆಯಲ್ಲಿನ ಕಪಗಲ್ ಗ್ರಾಮದಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಾಮಕ್ಕೆ ವೇಗದೂತ ಬಸ್ ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಾನ್ವಿ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ವೇಗದೂತ ಬಸ್‌ಗಳನ್ನು ನಿಲ್ಲಿಸಲು ಒತ್ತಾಯಿಸಿ ವಿದ್ಯಾರ್ಥಿಗಳು, ಪಾಲಕರು, ಗ್ರಾಮಸ್ಥರು ರಸ್ತೆ ತಡೆ ನಡೆಸಿ ಸೋಮವಾರ ಪ್ರತಿಭಟಿಸಿದರು.

ಸುಮಾರು 1 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರಿಂದ ಮುಖ್ಯರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾನ್ವಿ ಪೊಲೀಸ್ ಠಾಣಾ ಪಿಎಸ್ಐ ಮಹಾದೇವಪ್ಪ ಗಟ್ಟು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಮನವೋಲಿಸಿ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ರಾಜ್ಯ ಹೆದ್ದಾರಿಯಲ್ಲಿದ್ದರು ಕಪಗಲ್‌ ಗ್ರಾಮಕ್ಕೆ ರಾಯಚೂರು ಮಾನ್ವಿ ಮಾರ್ಗವಾಗಿ ಸಂಚಾರಿಸುವ ವೇಗದೂತ ಬಸ್‌ಗಳನ್ನು ಶಾಲಾ ಸಮಯಕ್ಕೆ ಬೆಳೆಗ್ಗೆ ಮತ್ತು ಸಂಜೆ ನಿಲುಗಡೆ ಮಾಡುವಂತೆ ಹಲವು ಬಾರಿ ಸಾರಿಗೆ ಘಟಕದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಹೊಗಲು ಸಾಧ್ಯವಾಗುತ್ತಿಲ್ಲ. ಅದ್ದರಿಂದ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ವಿದ್ಯಾರ್ಥಿಗಳು, ಪಾಲಕರು ಹಾಗೂ ಗ್ರಾಮಸ್ಥರು ಇದ್ದರು.