ಸಾರಾಂಶ
ಕಟ್ಟಡ ಕಾರ್ಮಿಕರ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಜಯಂತ್ ನಾಯಕ್, ಚಂದ್ರಹಾಸ ಪಿಲಾರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಹೋರಾಟದ ಭಾಗವಾಗಿ ಕಟ್ಟಡ ಕಾರ್ಮಿಕರ ಅಖಿಲ ಭಾರತ ಮತ್ತು ರಾಜ್ಯಮಟ್ಟದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಯತು.ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ಎರಡು ತಿಂಗಳಿನಿಂದ ಬಾಕಿಯಾದ ಮಾಸಿಕ ಪಿಂಚಣಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರುಕಟ್ಟಡ ಕಾರ್ಮಿಕರ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಜಯಂತ್ ನಾಯಕ್, ಚಂದ್ರಹಾಸ ಪಿಲಾರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.