ಸಿಆರ್‌ಎಸ್‌ ವಿರುದ್ಧ ಹಗುರ ಹೇಳಿಕೆ ನೀಡಿದರೆ ಪ್ರತಿಭಟನೆ: ಗಂಗಾಧರ್ ಎಚ್ಚರಿಕೆ

| Published : Jul 19 2024, 12:52 AM IST

ಸಾರಾಂಶ

ಕೇಂದ್ರ ಸಚಿವ ಎಚ್‌ಡಿಕೆ ಅವರು ಕೇಂದ್ರ ಸರ್ಕಾರದ ಅಧೀನದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿ. ಅದನ್ನು ಬಿಟ್ಟು ರಾಜ್ಯ ಸರ್ಕಾರದ ಅಧೀನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಏನು ಪ್ರಯೋಜನ?. ರಾಜ್ಯ ಸರ್ಕಾರದ ಅಧೀನದ ಅಧಿಕಾರಿಗಳೆಗೆ ಸಭೆ ನಡೆಸಿ ಲೋಕಸಭೆಯಲ್ಲಿ ಏನು ಚರ್ಚಿಸುತ್ತಾರೆ?.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಹಗುರ ಹೇಳಿಕೆ ನೀಡಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರು ಕೆಲಸ ಮಾಡುವ ಬಗ್ಗೆ ನಿಮ್ಮಿಂದ ಬುದ್ಧಿ ಹೇಳಿಸಿಕೊಳ್ಳುವ ಅಗತ್ಯತೆ ಇಲ್ಲ. ಚಲುವರಾಯಸ್ವಾಮಿ ವಿರುದ್ಧ ಮಾತನಾಡಿದರೆ ಲೀಡರ್ ಆಗುತ್ತೇನೆ ಎಂದುಕೊಂಡಿದ್ದರೆ ಅದು ನಿಮ್ಮ ಭ್ರಮೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಕ್ಷೇತ್ರದಲ್ಲಿದ್ದು ಸಮಸ್ಯೆಗಳನ್ನು ಬಗೆಹರಿಸದೆ, ಜನರ ಕೈಗೆಸಿಗದಿರುವುದಕ್ಕೆ ನಾವು ಸಹ ಜವಾಬ್ದಾರೆಯೇ. ಕುಟುಂಬದ ಆರೋಗ್ಯ ಸಮಸ್ಯೆಯಿಂದ ಅಮೆರಿಕಾಕ್ಕೆ ಹೋಗಿ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿಯೇ ಇದ್ದು ಸಮಸ್ಯೆ ಬಗೆಹರಿಸಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿದ್ದಾರೆ ಎಂದರು.

ಕೇಂದ್ರ ಸಚಿವ ಎಚ್‌ಡಿಕೆ ಅವರು ಕೇಂದ್ರ ಸರ್ಕಾರದ ಅಧೀನದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿ. ಅದನ್ನು ಬಿಟ್ಟು ರಾಜ್ಯ ಸರ್ಕಾರದ ಅಧೀನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಏನು ಪ್ರಯೋಜನ?. ರಾಜ್ಯ ಸರ್ಕಾರದ ಅಧೀನದ ಅಧಿಕಾರಿಗಳೆಗೆ ಸಭೆ ನಡೆಸಿ ಲೋಕಸಭೆಯಲ್ಲಿ ಏನು ಚರ್ಚಿಸುತ್ತಾರೆ. ಡಿಸಿ, ಸಿಇಒ ತಪ್ಪುಗಳ ಬಗ್ಗೆ ಲೋಕಸಭೆಯಲ್ಲಿ ಕೇಳೋಕ್ಕೆ ಆಗುತ್ತಾ?, ಇವರು ವಿಧಾನಸಭೆಗೆ ಬರೋಕೆ ಅವಕಾಶವಿದೆಯಾ? ಎಂದು ಹೇಳಿ ಸರ್ಕಾರದ ಆದೇಶವನ್ನು ಸಮರ್ಥಿಸಿಕೊಂಡರು.

ಮುಖಂಡ ಬಿ.ರೇವಣ್ಣ ಮಾತನಾಡಿ, ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಬೇಕು. ಅಧಿಕಾರ ಇಲ್ಲ ಅಂದ್ರೆ ಸಿ.ಎಸ್.ಪುಟ್ಟರಾಜು ಅವರಿಗೆ ಸುಮ್ಮನೆ ಕೂರೋಕೆ ಆಗೋದಿಲ್ಲ. ಹಾಗಾಗಿ ಸಚಿವರ ವಿರುದ್ಧ ಟೀಕೆಟಿಪ್ಪಣಿ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ವಿಜೇಂದ್ರಕುಮಾರ್, ಶ್ರೀಕಾಂತ್, ಸಿ.ಎಂ.ದ್ಯಾವಪ್ಪ, ರಾಜಣ್ಣ, ಸಿ.ಆರ್.ರಮೇಶ, ಭರತ್, ರಾಜೇಶ್(ಲೋಕಿ), ಬಸವರಾಜು, ದೊಡ್ಡವೆಂಕಟಯ್ಯ ಸೇರಿದಂತೆ ಹಲವರು ಇದ್ದರು.