ನಾಳೆ ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಧರಣಿ

| Published : Dec 12 2023, 12:45 AM IST

ಸಾರಾಂಶ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಡಿ. 13 ರಂದು‌ ಬೆಳಗಾವಿಯ ಕಿತ್ತೂರು ಚೆನ್ಮಮ್ಮ ವೃತ್ತದಲ್ಲಿ‌ ಸಮಾಜ ಬಾಂಧವರಿಂದ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಧಾರವಾಡ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಡಿ. 13 ರಂದು‌ ಬೆಳಗಾವಿಯ ಕಿತ್ತೂರು ಚೆನ್ಮಮ್ಮ ವೃತ್ತದಲ್ಲಿ‌ ಸಮಾಜ ಬಾಂಧವರಿಂದ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ - 2 ಮತ್ತು ಲಿಂಗಾಯತ ಒಳಪಂಗಡಗಳಿಗೆ ಕೇಂದ್ರದ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆಗೆ ಪ್ರಸ್ತಾವನೆ ಸಲ್ಲಿಸುವ ಬೇಡಿಕೆಗೆಗಾಗಿ ಕಳೆದ ಮೂರು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದೆ. ಅದರ ಫಲವಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಹೊಸದಾಗಿ ಸೃಷ್ಟಿಸಿದ‌ 2 ಡಿ ವರ್ಗದಲ್ಲಿ ಮೀಸಲಾತಿ ಕಲ್ಪಿಸಲಾಯಿತು. ಆದರೆ ಚುನಾವಣೆ ಬಂದು ಸರ್ಕಾರ ಬದಲಾವಣೆಯಾಯಿತು. ಈಗ ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ಹೋರಾಟಕ್ಕೆ ಒಂದೂ ಬಾರಿ ಸ್ಪಂದನೆ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಧ್ಯ ಆಡಳಿತಾರೂಢ ಪಕ್ಷದಲ್ಲಿನ ಸಚಿವರು,‌ ಶಾಸಕರು ಕೂಡ ತಮ್ಮ ಇತಿಮಿತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ‌ ಮುಖಮಂತ್ರಿಗಳು ಸೂಕ್ತ ರೀತಿಯಲ್ಲಿ ಸ್ಪಷ್ಟವಾಗಿ ತೀರ್ಮಾನ ಕೈಕೊಳ್ಳದಿರುವುದು‌ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಬೇಕಿದೆ. ಅದಕ್ಕಾಗಿ ಸಮಾಜದ ಶಾಸಕ ಬಸನಗೌಡ ಯತ್ನಾಳ ಸಹ ಕೈ ಜೋಡಿಸಲು ಒಪ್ಪಿದ್ದಾರೆ ಎಂದು ಸ್ವಾಮೀಜಿ ಹೇಳಿದರು.11ಡಿಡಬ್ಲೂಡಿ2

ಜಯ ಬಸವ ಮೃತ್ಯುಂಜಯ ಸ್ವಾಮೀಜಿ